ಮಕ್ಕಳ ಸಾಹಿತಿಗಳನ್ನು ಗೌರವಿಸುವುದು ನಮ್ಮ ಕರ್ತವ್ಯ – ಡಾ.ಮನಗೂಳಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳ ಸಾಹಿತ್ಯದ ಕಾರ್ಯಕ್ರಮಗಳು ಜರುಗುತ್ತಿರುವುದು ಸಂತಸ ತಂದಿದೆ. ಮಕ್ಕಳಲ್ಲಿರುವ ಸೃಜನಾತ್ಮಕ ಶಕ್ತಿಯನ್ನು ಹೊರ ಹಾಕಿ ಅವರನ್ನು ಈ ಸಮಾಜದ ಮುಖ್ಯ ವಾಹಿನಿಗೆ ಕರೆ ತರುವಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಮಕ್ಕಳ ವೈದ್ಯ ಡಾ. ಚನ್ನವೀರ(ಮುತ್ತು) ಮನಗೂಳಿ ಹೇಳಿದರು.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ತಾಲೂಕಾ ಮಕ್ಕಳ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿರುವ ಶಿಕ್ಷಕರ ದಿನೋತ್ಸವದ ನಿಮಿತ್ತ ಜಿಲ್ಲಾ ಮಟ್ಟದ ಮಕ್ಕಳು ಮೆಚ್ಚಿದ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಮ್ಮಯ ಪರಂಪರೆಯ ಜ್ಞಾನ ಇಂದಿನ ಮಕ್ಕಳಿಗೆ ತಿಳಿಸುವಲ್ಲಿ ಶಿಕ್ಷಕರು ಪ್ರಯತ್ನ ಮಾಡಬೇಕು. ನಮ್ಮ ಪರಂಪರೆಗಳು ನಮ್ಮ ಸಂಸ್ಕೃತಿ, ಪರಂಪರೆಗಳು ಬೆಳೆದಷ್ಟು ದೇಶ ಬೆಳೆಯುತ್ತದೆ. ಜಿಲ್ಲೆಯಲ್ಲಿ ಅನೇಕ ಮಕ್ಕಳ ಸಾಹಿತಿಗಳಿದ್ದಾರೆ ಅಂತವರನ್ನು ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು.

ಈ ಸಂಧರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ, ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ, ಬಿಜೆಪಿ ಮುಖಂಡ ಮುತ್ತು ಶಾಬಾದಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ನೀರಲಗಿ, ಎಸ್.ಬಿ.ಚೌಧರಿ, ಎಲೈಟ್ ಶಿಕ್ಷಣ ಸಂಸ್ಥೆಯ ಮೈಬೂಬ ಅಸಂತಾಪೂರ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಶೋಕ ಬಿರಾದಾರ ಮಾತನಾಡಿ, ಮಕ್ಕಳ ಸಾಹಿತ್ಯ ಪರಿಷತ್ತು ಉತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಸಂತಸ ತಂದಿದೆ. ಮುಂಬರುವ ದಿನಗಳಲ್ಲಿ ಮಕ್ಕಳಿಗೆ ವಿವಿಧ ಚಟುವಟಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರಲ್ಲಿನ ಸೃಜನಶೀಲ ಶಕ್ತಿಯನ್ನು ಬೆಳೆಸಬೇಕು ಎಂದರು.

- Advertisement -

ಸಾನ್ನಿಧ್ಯ ವಹಿಸಿದ ಆಲಮೇಲದ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯರು ಆಶೀರ್ವಚನ ನೀಡಿದರು. ಹಿರಿಯ ಪತ್ರಕರ್ತ ಶಾಂತೂ ಹಿರೇಮಠ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 35 ಜನ ಶಿಕ್ಷಕರಿಗೆ ಮಕ್ಕಳು ಮೆಚ್ಚಿದ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ವೇದಿಕೆ ಮೇಲೆ ವರ್ತಕ ರಾಚಪ್ಪ ವಾರದ, ಸುಮಂಗಲಾ ಕೋಳೂರ, ರುಕ್ಮೀಣಿ ಬಿಂಜಲಬಾವಿ, ರೇಣುಕಾ ಕಲಬುರ್ಗಿ, ವೀರೇಶ ಮಾಶೆಟ್ಟಿ, ಆನಂದ ಭೂಸನೂರ, ಎಮ್.ಎಸ್.ಕುದ್ನಾಪೂರ, ವ್ಹಿ.ಆರ್.ದಸ್ತರೆಡ್ಡಿ, ಜಗದೀಶ ಸಾಲೊಳ್ಳಿ, ಕಮಲಾ ಗೆಜ್ಜಿ, ಪಂಡಿತ ಅವಜಿ ಸೇರಿದಂತೆ ಇತರರು ಇದ್ದರು.

ಕಾರ್ಯಕ್ರಮದಲ್ಲಿ ಮಕ್ಕಳ ಸಾಹಿತಿ ಬಿಂದುರಾವ ನಾಡಗೌಡ, ಡಾ.ಎಂ.ಎಂ.ಪಡಶೆಟ್ಟಿ, ಡಾ. ಜಿ.ಎಸ್.ಭೂಸಗೊಂಡ, ಪ್ರೋ ಸಿದ್ದಲಿಂಗ ಕಿಣಗಿ, ಬಸವರಾಜ ಅಗಸರ, ಆನಂದ ಶಾಬಾದಿ, ಗುರುನಾಥ ಅರಳಗುಂಡಗಿ, ಡಾ. ಪ್ರಕಾಶ ರಾಗರಂಜನಿ, ಪ್ರದೀಪ ಕತ್ತಿ, ಮಹಾಂತೇಶ ನೂಲಾನವರ, ಜ್ಞಾನೇಶ ಗುರವ, ನಾಗೇಶ ತಳವಾರ, ಪ್ರಶಾಂತ ಪೂಜಾರಿ, ಪರುಶುರಾಮ ಖಾನಾಪೂರ, ರಾಜು ಕುಂಬಾರ, ಮುತ್ತು ಬ್ಯಾಕೋಡ, ಸಾಯಬಣ್ಣ ದೇವರಮನಿ ಸೇರಿದಂತೆ ಅನೇಕರು ಇದ್ದರು.

ಮಕ್ಕಳ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಅಶೋಕ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ. ಪ್ರಕಾಶ ಪ್ರಾರ್ಥಿಸಿದರು, ಪಂಡಿತ ಅವಜಿ ಸ್ವಾಗತಿಸಿದರು, ಜಗದೀಶ ಸಾಲಳ್ಳಿ ನಿರೂಪಿಸಿದರು.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!