ಬೀದರ – ಕೈ ಪಕ್ಷವನ್ನು ಬಿಟ್ಟು ಹೋದವರನ್ನು ವಾಪಾಸ್ ಪಕ್ಷಕ್ಕೆ ತಗೆದುಕೊಳ್ಳೊದಿಲ್ಲ. ಪಕ್ಷಾಂತರಿಗಳಿಗೆ ನಮ್ಮಲ್ಲಿ ಅವಕಾಶ ಇಲ್ಲಾ ಎಂದು ಕಾಂಗ್ರೆಸ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜೀನಾಮೆ ನೀಡೋದು ಬಿಡೋದು ಅವರಿಗೆ ಬಿಟ್ಟ ವಿಚಾರ ಈ ಬಗ್ಗೆ ನಾನು ಮಾತನಾಡೋದಿಲ್ಲ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಈ ಬಗ್ಗೆ ನಮ್ಮ ವರಿಷ್ಠರು ಈ ಮೊದಲೇ ಹೇಳಿಕೆ ಕೊಟ್ಟಿದ್ದಾರೆ ಎಂದರು.
ಜಮೀರ ಹೇಳಿಕೆ ವಿಚಾರ
ಸಿದ್ಧರಾಮಯ್ಯ ಮುಖ್ಯಮಂತ್ರಿ ಎಂಬ ಜಮೀರ ಅಹ್ಮದ ಹೇಳಿಕೆ ಕುರಿತಂತೆ ಮಾತನಾಡಿದ ಖಂಡ್ರೆಯವರು, ಸದ್ಯಕ್ಕೆ ಅಂಥ ಯಾವ ವಿಚಾರ ಪಕ್ಷದ ಮುಂದೆ ಇಲ್ಲ.
ಕೆಪಿಸಿಸಿ ಅಧ್ಯಕ್ಷರು ರಾಜ್ಯ ರಾಜಕೀಯದ ಸ್ಥಿತಿಗತಿ ಕುರಿತಂತೆ ಮಾತನಾಡಲು ದೆಹಲಿಗೆ ಹೋಗಿದ್ದಾರೆ. ಅದಕ್ಕೆ ಬೇರೆ ಯಾವ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು.
ಸದ್ಯ ಕೋವಿಡ್ ನಿಂದಾಗಿ ದೇಶದಲ್ಲಿ ಸಾವು ನೋವುಗಳಾಗುತ್ತಿವೆ ಅದರ ಬಗ್ಗೆ ಪಕ್ಷ ಚಿಂತನೆ ನಡೆಸಿದೆ ಎಂದು ಖಂಡ್ರೆ ಹೇಳಿದರು.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ