ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ; ಕರವೇ ಹೋರಾಟ

Must Read

ಬೆಂಗಳೂರು – ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಎನ್ನುವ ಸಂದೇಶದೊಂದಿಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲ ಕನ್ನಡಿಗರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರವೇ ಸಾಂಸ್ಕೃತಿಕ ಘಟಕದ ರಾಜ್ಯ ಉಪಾಧ್ಯಕ್ಷ ಹಾಗೂ ಕಸಾಪ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ತಿಳಿಸಿದ್ದಾರೆ ನೀಡಿದ್ದಾರೆ.

ಕನ್ನಡದ ಮಕ್ಕಳಿಗೆ ಉದ್ಯೋಗ ನಮ್ಮ ಜನ್ಮ ಸಿದ್ಧ ಹಕ್ಕು ಬನ್ನಿ ಹೋರಾಟದಲ್ಲಿ ಭಾಗವಹಿಸಿ ಎಂದು ಅವರು ಕರೆ ನೀಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group