- Advertisement -
ಬೀದರ – ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಹಾಗೂ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಬೀದರ್ ನಲ್ಲಿ ನಡೆದಿದೆ.
ಮಾದಕ ವಸ್ತು ನಿಯಂತ್ರಣ ಆಕ್ಟ್ ಹಾಕಿ ಪ್ರಕರಣ ಹಾಕಿದ ಪೊಲೀಸ್ ಇಲಾಖೆ ಸಂಜು ಕುಮಾರ್ ಚವ್ಹಾಣ್ ಎಂಬ ಬಂಧಿತ ಆರೋಪಿಯಿಂದ 1 ಲಕ್ಷ 40 ಸಾವಿರ ಮೌಲ್ಯದ ಗಾಂಜಾವನ್ನು ಅಬಕಾರಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ತೆಲಂಗಾಣದಿಂದ ಹುಮ್ನಾಬಾದ್ ಕಡೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಪೊಲೀಸರು ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಗಾಂಜಾ ಬಳಿ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… 14 ಕೆಜಿ ಗಾಂಜಾ ಸೇರಿದಂತೆ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿದ ಅಬಕಾರಿ ಪೊಲೀಸರು ಎನ್ ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- Advertisement -
ವರದಿ: ನಂದಕುಮಾರ ಕರಂಜೆ, ಬೀದರ