ಪತ್ರಕರ್ತರಿಗೆ ಮಾಸಿಕ ಗೌರವಧನ ನೀಡಬೇಕು – ಲಕ್ಕಣ್ಣ ಸವಸುದ್ದಿ ಆಗ್ರಹ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಮೂಡಲಗಿ: ಆರ್ಥಿಕವಾಗಿ ಪತ್ರಕರ್ತರು ಸಂಕಷ್ಟದಲ್ಲಿದ್ದರೂ ಕೊರೋನಾ ಮಹಾಮಾರಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಅಪಾಯ ಲೆಕ್ಕಿಸದೆ ತಮ್ಮ ಜೀವದ ಹಂಗು ತೊರೆದು ಜನತೆಗೆ ಸುದ್ದಿ ತಲುಪಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಫ್ರಂಟ್ ಲೈನ್ ವಾರಿಯರ್ಸ್ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು.

ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ತಮ್ಮ ಸ್ವಂತ ಖರ್ಚಿನಿಂದ ವಿಶೇಷ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ವಿವಿಧ ಗಾಮಗಳಲ್ಲಿಯ ಬಡವರಿಗೂ ದಿನಸಿ ಕಿಟ್ ವಿತರಿಸುವುದಾಗಿ ಹೇಳಿ, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಪತ್ರಕರ್ತರು ಇಂದು ಕೋವಿಡ್ ಸಂದರ್ಭದಲ್ಲಿ ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಸರಕಾರ ಅವರಿಗೆ ಮಾಸಿಕ ರೂಪದಲ್ಲಿ ಗೌರವ ಧನ ಒದಗಿಸಬೇಕು. ಸದ್ಯದಲ್ಲಿ ಇದೇ ವಿಷಯವಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೋವಿಡ್ ಮಾರ್ಗಸೂಚಿಯೊಂದಿಗೆ ಎಲ್ಲ ಪತ್ರಕರ್ತರಿಗೆ ವಿವಿಧ ಸೌಲಭ್ಯ ನೀಡುವಂತೆ ಉಪವಾಸ ಸತ್ಯಾಗ್ರಹ ,ಹೋರಾಟ ಹಮ್ಮಿಕೊಳ್ಳುವುದಾಗಿ ಹೇಳಿದರು.

ಅರಭಾವಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗುರುನಾಥ ಗಂಗನ್ನವರ ಮಾತನಾಡಿ, ಪತ್ರಕರ್ತರು ಕೋವಿಡ್ ಸಂದರ್ಭದಲ್ಲಿ ಆತಂಕದ ದಿನಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಎಂದು ಗುರುತಿಸಿದೆ. ಆದರೆ ಸರ್ಕಾರ ಅವರಿಗೆ ಹೇಳಿಕೊಳ್ಳುವಂತಹ ಯಾವುದೆ ಸೌಲಭ್ಯಗಳನ್ನು ನೀಡಿಲ್ಲ ಅವರಿಗೆ ಆರ್ಥಿಕ ನೆರವು ನೀಡಬೇಕಾದ ಅಗತ್ಯವಿದೆ ಎಂದರು.

- Advertisement -

ಪ್ರೆಸ್‍ಕ್ಲಬ್ ಅಧ್ಯಕ್ಷ ಲಕ್ಷ್ಮಣ ಅಡಿಹುಡಿ ಮಾತನಾಡಿ, ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ನಿಂತು ಎಲ್ಲ ಪತ್ರಕರ್ತರಿಗೂ ವಿವಿಧ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಸರಕಾರವನ್ನು ಒತ್ತಾಯಿಸುವ ಅವರ ಹೋರಾಟ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಶಿವಾನಂದ ಮಡಿವಾಳರ, ಸುಭಾಸ ಲೋಕನ್ನವರ, ಶ್ರೀಕಾಂತ ದಡ್ಡುಗೋಳ, ಇಜಾಜ ಕೊಟ್ಟಲಗಿ ಇನ್ನಿತರರು ಇದ್ದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!