spot_img
spot_img

ನೂತನ ಕೋರ್ಟ್ ಕಟ್ಟಡ ಕಾಮಗಾರಿ ವೀಕ್ಷಿಸಿದ ನ್ಯಾಯಾಧೀಶ

Must Read

ಮೂಡಲಗಿ: ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಲು ಆಗಮಿಸಿದ ಬೆಳಗಾವಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುರಳಿಧರ ಪೈ ಅವರು ನಿರ್ಮಾಣ ಹಂತದ ಕಟ್ಟಡ ಕಾಮಗಾರಿಯ ಗುಣಮಟ್ಟವನ್ನು ವೀಕ್ಷಿಸಿ ವಕೀಲರೊಂದಿಗೆ ಸಮಾಲೋಚಿಸಿ ಹಲವಾರು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದಿಂದ, ಮೂಡಲಗಿ ತಾಲ್ಲೂಕಿಗೆ ಸೇರ್ಪಡೆಗೊಂಡಿರುವ ಗ್ರಾಮಗಳಲ್ಲಿರುವ ವ್ಯಾಜ್ಯಗಳನ್ನು ಮೂಡಲಗಿ ನ್ಯಾಯಾಲಯದ ವ್ಯಾಪ್ತಿಗೆ ವರ್ಗಾಯಿಸುವ ಕುರಿತು ಮನವಿಯನ್ನು ಸಲ್ಲಿಸಿದರು.

ಮೂಡಲಗಿ ಜೆಎಮ್‍ಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್ ಎಸ್ ಗೋಡಿಗೌಡರ,ಪಿಎಸ್‍ಐ ಎಚ್ ವಾಯ್ ಬಾಲದಂಡಿ, ಮಾಜಿ ಅಧ್ಯಕ್ಷ ಕೆ ಪಿ ಮಗದುಮ್, ಶಂಕರ ತುಕ್ಕನ್ನವರ, ವಿನೋದ ಪಾಟೀಲ, ರವಿ ಪತ್ತಾರ, ಭೀಮಶಿ ಹೆಬ್ಬಾಳ, ಶಿವಬಸು ತುಪ್ಪದ, ಆರ್ ಬಿ ಮಮದಾಪೂರ ಸೇರಿದಂತೆ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳು, ನ್ಯಾಯಾಲಯ ಸಿಬ್ಬಂದಿಗಳು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!