- Advertisement -
ಮೈಸೂರಿನ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ.ಕೆ.ವೈಭವಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವತಿಯಿಂದ ತುಮಕೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ಸಹಪಠ್ಯ ಸ್ಪರ್ಧೆಯ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಸಾಂಸ್ಕೃತಿಕ ಜಿಲ್ಲೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಈ ಅಭೂತಪೂರ್ವ ಸಾಧನೆಯೊಂದಿಗೆ ಗೆಲುವಿನ ಗರಿ ತಂದ ವಿದ್ಯಾರ್ಥಿನಿಯನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.