spot_img
spot_img

ಜಲ ಜೀವನ್ ಅಡಿಯಲ್ಲಿ ಪ್ರತಿ ಹಳ್ಳಿಗೆ ಕೆರೆ ನಿರ್ಮಿಸಲು ಕೇಂದ್ರಕ್ಕೆ ಕಡಾಡಿ ಮನವಿ

Must Read

- Advertisement -

ಮೂಡಲಗಿ: ಕರ್ನಾಟಕ ಮತ್ತು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುವದರಿಂದ ಕುಡಿಯುವ ನೀರಿನ ಪೂರೈಕೆಗೆ ಕಷ್ಟದಾಯಕವಾಗುತ್ತದೆ. ಪ್ರತಿ ವರ್ಷ ಸಂಭವಿಸುವ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ಪ್ರಸ್ತಾವನೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು.

ಜಲ ಜೀವನ್ ಮಿಷನ್ ಕೇಂದ್ರ ಸರ್ಕಾರದ ಒಂದು ಪ್ರಮುಖ ಯೋಜನೆಯಾಗಿದ್ದು, 2024 ರ ವೇಳೆಗೆ ದೇಶದ ಪ್ರತಿ ಮನೆಗೆ ನಲ್ಲಿಗಳ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯವನ್ನು ನಿರ್ವಹಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯತಿಗಳಿಗೆ ನೀಡಲಾಗಿದೆ. ಈ ಯೋಜನೆಯಲ್ಲಿರುವ ಕೆಲವು ನಿಬಂಧನೆಗಳಿಗೆ ತಿದ್ದುಪಡಿ ತಂದು ಕಾಮಗಾರಿಯ ನಿರ್ವಹಣೆಯನ್ನು ಗುಣಮಟ್ಟದ ಆಧಾರದ ಮೇಲೆ ರಾಜ್ಯ ಸರ್ಕಾರಕ್ಕೆ ವರ್ಗಾಯಿಸಬೇಕು ಮತ್ತು ಇದಕ್ಕಾಗಿ 15 ನೇ ಹಣಕಾಸು ಆಯೋಗವು ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕಾಗಿ ನೀಡಿರುವ ಮೊತ್ತವನ್ನು ಬಳಸಬೇಕೆಂದರು.

ಈ ಯೋಜನೆಯ ಫಲ ಪಡೆದ ಜಿಲ್ಲೆಗಳು ಹೆಚ್ಚಾಗಿ ಗ್ರಾಮೀಣ ಭಾಗವನ್ನು ಹೊಂದಿದ್ದು, ಈ ಗ್ರಾಮೀಣ ಭಾಗಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ ರೈತರು, ಕಾರ್ಮಿಕರು ಮತ್ತು ಮಹಿಳೆಯರ ಸಂಖ್ಯಾಬಲವು ಹೆಚ್ಚಾಗಿರುವದರಿಂದ, ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮ ಪಂಚಾಯತಿಗಳಿಗೆ ಹಾಕುತ್ತಿರುವ ಶೇ 10 ರಷ್ಟು ಹೊರೆಯನ್ನು ತೆಗೆದು ಹಾಕಿ ಅಲ್ಲಿನ ಪಂಚಾಯತಿಗಳ ಮತ್ತು ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರವನ್ನು ಆಗ್ರಹಿಸಿದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group