ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥಣಿ ತಾಲೂಕಿನ ಐಗಳಿ ಗ್ರಾಮದ ಯೋಧ ಕಿರಣರಾಜ ಕೇದಾರಿ ತೆಲಸಂಗ ಅವರು ಹೃದಯಾಘಾತದಿಂದ ನಿಧನರಾಗಿದ್ದು ಅವರ ಪಾರ್ಥಿವ ಶರೀರ ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಐಗಳಿ ಸ್ವಗ್ರಾಮಕ್ಕೆ ಸಾಗಿಸುತ್ತಿರುವ ಸಂದರ್ಭದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವೀರ ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ವಂದನೆ ಸಲ್ಲಿಸಿದರು.
ಮೃತರ ಕುಟುಂಬಕ್ಕೆ ವೀರ ಯೋಧನ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಮತ್ತು ಮೃತರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದು ಅವರು ಸಂತಾಪ ಸೂಚಿಸಿದರು.