ಮೂಡಲಗಿ – ಬೆಳಗಾವಿ ಜಿಲ್ಲೆಯ ಚಂದರಗಿ ಗ್ರಾಮದಲ್ಲಿ ಸಹಕಾರ ಕ್ಷೇತ್ರದಲ್ಲಿ ನಿರ್ಮಾಣಗೊಂಡ ದೇಶದ ಏಕೈಕ ಕ್ರೀಡಾ ವಸತಿ ಶಾಲೆಯಲ್ಲಿ ರೂ. 1.50 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ಸೈಕ್ಲಿಂಗ್ ಟ್ರ‍್ಯಾಕ್ (ವೆಲೊಡ್ರೋಮ್) ಅನ್ನು ಉದ್ಘಾಟಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆಯ ಸಚಿವರಾದ ಡಾ. ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸುವಂತೆ ಸಚಿವರನ್ನು ವಿನಂತಿಸಿದರು.
ಚಂದರಗಿ ಕ್ರೀಡಾ ವಸತಿ ಶಾಲೆ ಸಹಕಾರ ಕ್ಷೇತ್ರದಲ್ಲಿ ನಡೆಯುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಸದರಿ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಸೈಕ್ಲಿಂಗ್ ಟ್ರ‍್ಯಾಕ್ ಬೆಂಗಳೂರು ನಂತರ ಉತ್ತರ ಕರ್ನಾಟಕದ ಏಕೈಕ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಟ್ರ‍್ಯಾಕ್ ಆಗಿರುತ್ತದೆ. ಇದರಡಿ ಸೈಕ್ಲಿಂಗ್ ತರಬೇತಿಗೆ ಬೇಕಾದ ಮೂಲಸೌಕರ್ಯ ಅಭಿವೃದ್ದಿ, ಪರಿಣಿತ ತರಬೇತಿ ತಂಡ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ನಿರ್ಮಾಣದೊಂಡಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ಬಂದ ಸೈಕ್ಲಿಂಗ್ ಪಟುಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಯೊಡ್ಡಲು ಈ ಸಂಸ್ಥೆ ಸಹಕಾರಿಯಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.
ನನ್ನ ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಸಚಿವರು ಸಂಸ್ಥೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ಡೇರಿ ಫಾರ್ಮ ಮತ್ತು ಲೋಕಸಭೆ ಹೊಲುವ ಮಾದರಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಡೈನಿಂಗ್ ಹಾಲ್ ಮತ್ತು ಶಾಲೆಗಳಿಗಾಗಿ ತರಕಾರಿಗಳನ್ನು ಬೆಳೆಯುವುದು ಹೀಗೆ ಹಲವಾರು ಮಾಹಿತಿಗಳನ್ನು ಪಡೆದ ಸಚಿವರು ಸಂತಸ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಹಿತೈಸಿಗಳಾದ ಸಿದ್ದರಾಮ ಕಲೂತಿ ಮತ್ತು ಸಂಸ್ಥೆಯ ನಿರ್ದೇಶಕ ಪೃಥ್ವಿರಾಜ ಜಾಧವ ಉಪಸ್ಥಿತರಿದ್ದರು.