ಜನಗಣತಿಯ ಜೊತೆ ಜಾತಿಗಣತಿ ; ಕೇಂದ್ರದ ನಿರ್ಧಾರ ಸ್ವಾಗತಾರ್ಹ – ಈರಣ್ಣ ಕಡಾಡಿ

0
59

ಮೂಡಲಗಿ: ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಹಲವು ವರ್ಷಗಳಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ಈ ನಿರ್ಧಾರದಿಂದ ದೇಶದಲ್ಲಿ ಹಿಂದುಳಿದವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕ ಸ್ಥಿತಿಗತಿಗಳನ್ನು ಅರಿಯಲು ಅವರಿಗೆ ಯೋಜನೆಗಳನ್ನು ರೂಪಿಸಿ ಮುಖ್ಯ ವಾಹನಿಗೆ ತರಲು ತುಂಬಾ ಅನುಕೂಲವಾಗಲಿದೆ ಎಂದರು.

ಡಾ. ಬಿ.ಆರ್‌. ಅಂಬೇಡ್ಕರ್ ಅವರ ಸಿದ್ಧಾಂತ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಜಾತಿಗಣತಿಗೆ ಮುಂದಾಗಿರುವ ನಿರ್ಧಾರವು ಎನ್.ಡಿ.ಎ ಸರ್ಕಾರ ತನ್ನ ಸಾಮಾಜಿಕ ಬದ್ಧತೆಯನ್ನು ಮೆರೆದಿದೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಮಾನ್ಯ ಪ್ರಧಾನ ಮಂತ್ರಿ ಗಳಿಗೆ ಕರ್ನಾಟಕದ ಜನತೆಯ ಪರವಾಗಿ ಅಭಿನಂದಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು.

LEAVE A REPLY

Please enter your comment!
Please enter your name here