ಸಿಂದಗಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ ರವರ ಅನುಮೋದನೆಯ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಮರಾಜ ಡಿ. ಪೂಜಾರಿ(ವಕೀಲರು) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಕೂಡಲೇ ಅಧಿಕಾರವನ್ನು ವಹಿಸಿಕೊಂಡು ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ.