spot_img
spot_img

ಕನ್ನಡ ಜ್ಯೋತಿಗೆ ಸಿಂದಗಿಯಲ್ಲಿ ಭವ್ಯ ಸ್ವಾಗತ

Must Read

ಸಿಂದಗಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಸಿಂದಗಿ ಪಟ್ಟಣಕ್ಕೆ ಆಗಮಿಸಿದ್ದು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು.

ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಕನ್ನಡಾಂಭೆ ವೃತ್ತದಲ್ಲಿ ಸಾರಂಗಮಠದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಆಲಮೇಲ ವಿರಕ್ತ ಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು, ಅಳ್ಳೋಳ್ಳಿಮಠದ ಶ್ರೀಗಳು, ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ಹಾಗೂ ಮಾಜಿ ಶಾಸಕ ಅಶೋಕ ಶಾಬಾದಿ ಮೆರವಣಿಗೆಗೆ ಭವ್ಯವಾಗಿ ಸ್ವಾಗತಿಸಿ ಚಾಲನೆ ನೀಡಿದರು.

ನಂತರ ಪಟ್ಟಣದ ಬಸವೇಶ್ವರ ವೃತ್ತದ ಮಾರ್ಗವಾಗಿ ಹೊರಟ ಕನ್ನಡ ರಥದ ಮೆರವಣಿಗೆಯು ವಿವಿಧ ಕಲಾ ತಂಡಗಳು, ಪಟ್ಟಣದ ವಿವಿದ ಶಾಲೆಗಳ ಮಕ್ಕಳು ಪಾಲ್ಗೊಂಡು ಎಚ್.ಜಿ.ಕಾಲೇಜಿನವರೆಗೆ ಸಾಗಿಬಂತು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೆವಾಡಗಿ, ಕಸಾಪ ಪದಾಧಿಕಾರಿಗಳಾದ ಎಂ.ಎ.ಖತೀಬ, ಶಿಲ್ಪಾ ಕುದರಗೊಂಡ, ರಮೇಶ ಪೂಜಾರಿ, ಶಾರದಾ ಮಂಗಳೂರ, ಪಂಡಿತ ಯಂಪೂರೆ, ಖಾದರ ವಾಲಿಕಾರ, ಶಿವು ಬಡಾನವರ, ಶೈಲಜಾ ಸ್ಥಾವರಮಠ, ಎನ್.ಎಂ.ಚಪ್ಪರಬಂದ, ಶಾಂತೂ ರಾಣಾಗೋಳ ಪಾಲ್ಗೊಂಡಿದ್ದರು

- Advertisement -
- Advertisement -

Latest News

ಉಂಡು ಮಲಗಿದ ಮೇಲೂ ಗಂಡ ಹೆಂಡಿರ ಜಗಳ !

ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ....
- Advertisement -

More Articles Like This

- Advertisement -
close
error: Content is protected !!