spot_img
spot_img

‘ಕನ್ನಡ ಕನ್ನಡ ಬರ್ರೀ ನಮ್ಮ ಸಂಗಡ’ ಎಂದ ಚಂಪಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುಷ್ಪನಮನ

Must Read

spot_img
- Advertisement -

ಬೆಂಗಳೂರು : ಕನ್ನಡವನ್ನು ಸದಾ ತಮ್ಮ ಸಂಗಡ ಇಟ್ಟುಕೊಂಡಿದ್ದ ಚಂದ್ರಶೇಖರ ಪಾಟೀಲರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಹತ್ವದ ಕೊಡುಗೆಯನ್ನು ನೀಡುವುದರ ಜೊತೆ ʻ*ಕನ್ನಡ ಕನ್ನಡ  ಬರ್ರೀ ನಮ್ಮ ಸಂಗಡ*’  ಎಂಬ ಕವಿತೆಯನ್ನು ನೀಡುವ ಮೂಲಕ ಸಮಸ್ತ ಕನ್ನಡ ನಾಡನ್ನು ಒಂದಾಗಿಸುವ ಮಹತ್ತರ ಕಾರ್ಯವನ್ನು ಮಾಡಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡ ಹಿರಿಯ ಸಾಹಿತಿ, ಚಿಂತಕ, ವಿಮರ್ಶಕ.ಹೋರಾಟಗಾರ ಚಂದ್ರಶೇಖರ ಪಾಟೀಲ್‌ ಅವರ ೮೪ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಪರಿಷತ್ತಿನ ಪಂಪ ಸಭಾಂಗಣದಲ್ಲಿ ಹಮ್ಮಿಕೊಂಡ ಪುಷ್ಪನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಚಂಪಾ ಮತ್ತು ತಮ್ಮ ನಡುವಿನ ಆತ್ಮೀಯತೆಯ ಬಗ್ಗೆ ತಿಳಿಸಿದರು. ಕನ್ನಡ ನಾಡು,ನುಡಿ ಸಮುದಾಯ ಬಗ್ಗೆ ಅಪಾರ ಅಭಿಮಾನವನ್ನು ಹೊಂದಿದ್ದರು. ತಾವು ದೂರದರ್ಶನದ ನಿರ್ದೇಶಕರಾಗಿದ್ದಾಗ ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದರು. ತಮ್ಮ ನಿಷ್ಠೂರವಾದದ ಮೂಲಕವೇ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಚಂಪಾವರು ನೆಲೆ ನಿಂತಿದ್ದರು ಎಂದು  ಜೋಶಿ ಅವರು ಚಂದ್ರಶೇಖರ ಪಾಟೀಲರ ಕುರಿತ ನೆನಪಿನ ಬುತ್ತಿಯನ್ನು ಬಿಚ್ಚಿಟ್ಟರು.  

- Advertisement -

ಮೈಸೂರಿನಲ್ಲಿ ನಡೆದ ೮೩ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಕೂಡ ಆಗಿದ್ದ ಚಂಪಾ ಅವರು  ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳಲ್ಲಿ ಗುರುತಿಸಿಕೊಂಡವರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಲೇ ತಮ್ಮ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾಗುತ್ತಾ ಬಂದವರು.  ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಗೋಕಾಕ ಚಳವಳಿ ಸೇರಿದಂತೆ ಮುಂತಾದ ಅನೇಕ ಜನಪರ ಚಳವಳಿಗಳಲ್ಲೂ ತಮನ್ನು ತೊಡಗಿಸಿಕೊಂಡವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ೨೬ದಿನ ಜೈಲುವಾಸವನ್ನನುಭವಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಚಂಪಾ ಅವರು ಶನಿವಾರದ ಪುಸ್ತಕ ಸಂತೆ ಎನ್ನುವ ಕಾರ್ಯಕ್ರಮಕ್ಕೆ ನಾಂದಿ ಹಾಡಿದ್ದರು. ಪ್ರತಿಶನಿವಾರವೂ ಪರಿಷತ್ತಿನ ಅಂಗಳದಲ್ಲಿ ಕನ್ನಡ ಪುಸ್ತಕ ಪ್ರಕಾಶಕರನ್ನು ಮತ್ತು ಮಾರಾಟಗಾರರನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಓದುಗರಿಗೆ ಪುಸ್ತಕಗಳು ದೊರೆಯುವಂತೆ ವ್ಯವಸ್ಥೆ ಮಾಡಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಚಂಪಾ ಅವರ ಕುರಿತು ಅಭಿಮಾನ ವ್ಯಕ್ತಪಡಿಸಿದರು. 

ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, ಬೇಕಿದ್ದರೆ ಇಂಗ್ಲಿಷನ್ನು ಪ್ರಾಥಮಿಕ ೫ನೇ ತರಗತಿಯಿಂದ (ಮಿಡ್ಲ ಸ್ಕೂಲ್) ಕಲಿಸಬೇಕು, ಕೇಂದ್ರ ಪಠ್ಯಕ್ರಮದ (ಹಿಂದಿ ಇಂಗ್ಲಿಷ್) ಮಾಧ್ಯಮಗಳ ಶಾಲೆಗಳಲ್ಲಿ ಕರ್ನಾಟಕದಲ್ಲಿ ಕನ್ನಡವನ್ನು ಕಲಿಸಬೇಕು- ಎಂಬ ವಿಷಯಗಳ ಬಗ್ಗೆ ಚಂಪಾ ಅವರು ಸರ್ಕಾರದೊಡನೆ ಹೋರಾಡಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ,ರಾಮಲಿಂಗ ಶೆಟ್ಟಿ ಅವರು ಹೇಳಿದರು. 

ಪರಿಷತ್ತಿನ ಇನ್ನೋರ್ವ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು ಅವರು ಮಾತನಾಡಿ,  ಚಂಪಾ ಅವರ ನೆನಪಿನ ಶಕ್ತಿಯನ್ನು ಯಾರಾದರೂ ಮೆಚ್ಚಿಕೊಳ್ಳಲೇ ಬೇಕು. ತಾವು ಆರಂಭಿಸಿದ ʻಸಂಕ್ರಮಣʼ ಪತ್ರಿಕೆಯನ್ನು ಸತತ ೫0 ವರ್ಷಗಳ ಕಾಲ ನಿರಂತರವಾಗಿ ಪ್ರಕಟಿಸಿ, ಸಮರ್ಥವಾಗಿ ಮಾರುಕಟ್ಟೆಯಲ್ಲಿ ಮಾರಾಟಮಾಡುತ್ತಿದ್ದರು. ಪುಸ್ತಗಳನ್ನು ಕ್ರಯಮಾಡಿಯೇ ಓದಬೇಕು ಎನ್ನುವ ಸ್ಪಷ್ಟನಿಲುವನ್ನು ಸಮಾಜಕ್ಕೆ ತಿಳಿಸಿಹೇಳುತ್ತಲೇ ಇದ್ದರು ಎಂದು ಹೇಳಿದರು. 

- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷರಾದ ಡಾ.ಬಿ.ಎಮ್. ಪಟೇಲ್ ಪಾಂಡು, ಪರಿಷತ್ತಿನ ವಿಶೇಷ ಆಡಳಿತಾಧಿಕಾರಿ ಸಿ. ಚಿಕ್ಕತಿಮ್ಮಯ್ಯ  ಮತ್ತು ಪರಿಷತ್ತಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಶ್ರೀನಾಥ್ ಜೆ 

ಮಾಧ್ಯಮ ಸಲಹೆಗಾರರು

ಕನ್ನಡ ಸಾಹಿತ್ಯ ಪರಿಷತ್ತು 

ಬೆಂಗಳೂರು

- Advertisement -
- Advertisement -

Latest News

ನೈಜ ಇತಿಹಾಸ ಹೊರತರಲು ಆಳ ಅಧ್ಯಯನ, ಸಂಶೋಧನೆ ಅವಶ್ಯಕ

ಹಿರೇ ಬಾಗೇವಾಡಿ: ನೈಜವಾದ ಇತಿಹಾಸವನ್ನು ಹೊರ ತರಬೇಕಾದರೆ ಪೂರ್ವ ತಯಾರಿ ಹಾಗೂ ಆಳವಾದ ಅಧ್ಯಯನ ಮತ್ತು ಸಂಶೋಧನೆಗಳ ಅವಶ್ಯಕತೆ ಇದೆ ಅಂದಾಗ ಮಾತ್ರ ಆ ಇತಿಹಾಸದ...
- Advertisement -

More Articles Like This

- Advertisement -
close
error: Content is protected !!
Join WhatsApp Group