spot_img
spot_img

ಗ್ರಾಮೀಣ ಜನರಿಂದ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಉಳಿವು -ಡಾ.ಭೇರ್ಯ ರಾಮಕುಮಾರ್

Must Read

- Advertisement -

ಮೈಸೂರು – ನಗರ ಹಾಗೂ ಪಟ್ಟಣಗಳ ಜನರು ತಮ್ಮ ಮಕ್ಕಳನ್ನು ಉದ್ಯೋಗ ಹಾಗೂ ಹಣ ಸಂಪಾದನೆಯ ಅತಿಯಾಸೆಯಿಂದ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಿದ್ದು, ಪರಿಸ್ಥಿತಿ ಹೀಗೇ ಮುಂದುವರೆದರೆ ರಾಜಧಾನಿ ಬೆಂಗಳೂರು, ಜಿಲ್ಲಾ ಕೇಂದ್ರಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವಿಷ್ಯದಲ್ಲಿ ಕಣ್ಮರೆಯಾಗಲಿದೆ ಎಂದು ಹಿರಿಯ ಸಾಹಿತಿ, ಪತ್ರಕರ್ತರು ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು.

ಅವರು ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಿಹಳ್ಳಿ ಗ್ರಾಮದಲ್ಲಿ ಇಂದು ಭಗತ್ ಸಿಂಗ್ ಯೂತ್ ಫೌಂಡೇಶನ್ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಗ್ರಾಮೀಣ ಜನರಿಗೆ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಗ್ರಾಮಿಣ ಜನತೆ ಕನ್ನಡದ ನಿಜವಾದ ಸಂರಕ್ಷಕರಾಗಿದ್ದಾರೆ. ಆದರೆ ಬ್ಯಾಂಕ್ ಗಳು, ಹೊಗೆಸೊಪ್ಪು ಮಾರಾಟ ಕೇಂದ್ರಗಳ ಕಚೇರಿಗಳಲ್ಲಿ ಅನ್ಯಭಾಷಿಗರ ಹಾವಳಿ ತೀವ್ರವಾಗಿದ್ದು, ಕನ್ನಡ ಭಾಷೆಯ ಬಗ್ಗೆ ಅವರು ತೋರಿಸುವ ಅಸಡ್ಡೆಯಿಂದಾಗಿ ಗ್ರಾಮೀಣ ಜನತೆ ತೊಂದರೆಗೆ ಸಿಲುಕಿದ್ದಾರೆ.ಈ ಬಗ್ಗೆ ಗ್ರಾಮೀಣ ಜನತೆ ಆಲೋಚಿಸಬೇಕು.ಕನ್ನಡ ಕಲಿಯದಿರುವ, ಬಳಸದಿರುವ ಅಧಿಕಾರಿಗಳ ವಿರುದ್ದ ದೂರು ನೀಡಬೇಕೆಂದು ನುಡಿದರು.

- Advertisement -

ಗ್ರಾಮೀಣ ಜನತೆ ತಮ್ಮ ಸಮುದಾಯದ ಆರೋಗ್ಯದ ಬಗ್ಗೆ ಗಮನಹರಿಸಬೇಕು.ಎಲ್ಲರೂ ಕಡ್ಡಾಯವಾಗಿ ಕರೋನಾ ವಿರುದ್ದದ ಲಸಿಕೆ ಪಡೆಬೇಕು. ತಮ್ಮ ಮನೆಯ ಸುತ್ತಲೂ ಸ್ವಚ್ಛ ಪರಿಸರ ಕಾಪಾಡಬೇಕು.ಪ್ರತಿಯೊಬ್ಬರೂ ತಮ್ಮ ಜಮೀನಿನಲ್ಲಿ ತಮ್ಮ ಜನ್ಮದಿನದಂದು, ತಮ್ಮ ಮದುವೆ ವಾರ್ಷಿಕೋತ್ಸವ ದಿನದಂದು, ತಮ್ಮ ಮಕ್ಕಳ ಜನ್ಮದಿನದಂದು, ತಮ್ಮ ತಂದೆ-ತಾಯಿಯ ಶ್ರಾದ್ಧದ ದಿನದಂದು ಒಂದೊಂದು ಸಸಿಯನ್ನು ನೆಟ್ಟು , ಕಾಪಾಡುವ ಮೂಲಕ ಪರಿಸರ ಸಂರಕ್ಷಿಸಬೇಕು ಎಂದು ಗ್ರಾಮೀಣ ಜನತೆಗೆ ಡಾ.ಭೇರ್ಯ ರಾಮಕುಮಾರ್ ಕಿವಿಮಾತು ನುಡಿದರು.

ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಚಿಕಿತ್ಸಾ ಶಿಬಿರಗಳು, ನೇತ್ರದಾನ ಶಿಬಿರಗಳು, ರಕ್ತದಾನ ಶಿಬಿರಗಳು, ಪರಿಸರ ಸಂರಕ್ಷಣಾ ಕಾರ್ಯಕ್ರಮ ಗಳನ್ನು ನಡೆಸುವ ಮೂಲಕ ಗ್ರಾಮೀಣ ಪ್ರದೇಶಗಳ ಜನರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದವರು ಶ್ಲಾಘಿಸಿದರು.

- Advertisement -

ಅತ್ತಿಗೋಡು ಗ್ರಾಮಪಂಚಾಯ್ತಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಪಂಚಾಯ್ತಿ ಸದಸ್ಯರಾದ ಸುಬ್ರಹ್ಮಣ್ಯ, ಮುರಳೀಧರ, ಮಾಜಿ ಗ್ರಾಮಪಂಚಾಯ್ತಿ ಸದಸ್ಯರಾದ ಮಹೇಶ್, ಗ್ರಾಮದ ಮುಖಂಡರಾದ ಸುರೇಶ್, ಮೈಸೂರಿನ ಕ್ಲಿಯರ್ ಮೆಡಿ ರೇಡಿಯೆಂಟಲ್ ಆಸ್ಪತ್ರೆಯ ತಜ್ಞ ವೈದ್ಯರಾದ ಕವನ ,ರಿಜ್ವಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಗತ್ ಸಿಂಗ್ ಯೂತ್ ಫೌಂಡೇಶನ್ ಅಧ್ಯಕ್ಷರಾದ ಹೆಚ್.ಎಸ್. ಯೋಗೇಶ್ ಅವರು ಮಾತನಾಡಿ ತಮ್ಮ ಸಂಸ್ಥೆಯ ಮುಂದಿನ ಯೋಜನೆಗಳನ್ನು ವಿವರಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಲ್ಲರನ್ನೂ ಸ್ವಾಗತಿಸಿದರು. ಕೃಷ್ಣಯ್ಯ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ಫೌಂಡೇಶನ್ ನ ಸದಸ್ಯರಾದ ಅಮಿತ್, ನಟರಾಜ್,ಸ್ವಾಮಿಗೌಡ, ಮೋಹನ್ ಕುಮಾರ್, ಆರ್.ಶಶಿಕುಮಾರ್, ಅಭಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆಯ ವತಿಯಿಂದ ಸಂಗರಶೆಟ್ಟಳ್ಳಿ ಹಾಗೂ ಅತ್ತಿಗೋಡು ಗ್ರಾಮಪಂಚಾಯ್ತಿ ವ್ಯಾಪ್ತಿಯ ಗ್ರಾಮೀಣ ಜನರಿಗಾಗಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.ಸುಮಾರು 30 ಜನರು ಇ.ಸಿ.ಜಿ. ಸೌಲಭ್ಯ ಪಡೆದರು. . ಶಿಬಿರದಲ್ಲಿ ಒಟ್ಟು 160 ಜನರ ಆರೋಗ್ಯ ತಪಾಸಣೆ ಮಾಡಿ, ತಜ್ಞ ವೈದ್ಯರು ಅಗತ್ಯ ಸಲಹೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಭಗತ್ ಸಿಂಗ್ ಯೂತ್ ಫೌಂಡೇಶನ್ ನಡೆಸಿದ ಕನ್ನಡ ರಾಜ್ಯೋತ್ಸವ ಹಾಗೂ ಉಚಿತ ಆರೋಗ್ಯ ಶಿಬಿರಗಳು ಸಂಗರಶೆಟ್ಟಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮನಗೆಲ್ಲುವಲ್ಲಿ ಅತ್ಯಂತ ಯಶಸ್ವಿಯಾಯಿತು.

- Advertisement -
- Advertisement -

Latest News

ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ ಸ್ಮಾರಕ ಭವನ

ಬೆಳಗಾವಿ- ಭಾರತದ ಶೂರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರು ಸನ್ ೧೮೯೨ ರಲ್ಲಿ ಕರ್ನಾಟಕದ ಬೆಳಗಾವಿಗೆ ಭೇಟಿ ಕೊಟ್ಟು ಅಕ್ಟೋಬರ್ ೧೬ ರಿಂದ ೨೭ ರ...
- Advertisement -

More Articles Like This

- Advertisement -
close
error: Content is protected !!
Join WhatsApp Group