spot_img
spot_img

ವೈದ್ಯ ಸೇವೆಯಲ್ಲಿ ಕನ್ನಡ ಬಳಕೆಗೆ ಆಗ್ರಹ

Must Read

- Advertisement -

ಮೈಸೂರು – ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಇಂದು ಮೈಸೂರು ಮಹಾನಗರ ಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಅರವಿಂದ್ ಶರ್ಮ ಮತ್ತು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರು ಮೈಸೂರು ಜಿಲ್ಲಾ ವೈದ್ಯಾಧಿಕಾರಿ ( ಡಿ.ಹೆಚ್.ಓ )ಗಳಾದ ಡಾ|| ಹೆಚ್.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ, ವೈದ್ಯ ದಿನಾಚರಣೆಯ ಶುಭಾಶಯ ತಿಳಿಸಿ , ವೈದ್ಯ ಸೇವೆಯಲ್ಲಿ ಕನ್ನಡದ ಬಳಕೆ ಕುರಿತಂತೆ ಹಕ್ಕೊತ್ತಾಯ ಪತ್ರ ನೀಡಲಾಯಿತು

ತಾವು ಪಡೆಯುತ್ತಿರುವ ವೈದ್ಯಕೀಯ ಚಿಕಿತ್ಸೆ ಬಗ್ಗೆ ತಿಳಿದುಕೊಳ್ಳಬೇಕಾದ್ದು ರೋಗಿಗಳಿಗೆ ಅವಶ್ಯಕ. ಈ ಹಿನ್ನೆಲೆಯಲ್ಲಿ ತಾವು ನೀಡುವ ಚಿಕಿತ್ಸೆ ಬಗ್ಗೆ ವೈದ್ಯರು ಕನ್ನಡದಲ್ಲಿ ವಿವರಿಸಬೇಕು.ಜೊತೆಗೆ ಆಸ್ಪತ್ರೆಯ ಎಲ್ಲಾ ಸೂಚನಾ ಫಲಕಗಳೂ ಕನ್ನಡದಲ್ಲಿ ಇರಬೇಕು.ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ‌ ಮಾತನಾಡಿದ ಡಾ.ಭೇರ್ಯ ರಾಮಕುಮಾರ್ ಹಕ್ಕೊತ್ತಾಯ ಮಾಡಿದರು.

‌‌‌ಅರವಿಂದ ಶರ್ಮ ಅವರು ಮಾತನಾಡಿ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯ ಸೂಚನಾಫಲಕಗಳಲ್ಲಿ ಹಾಗೂ ಪ್ರಕಟಣಾ ಫಲಕಗಳಲ್ಲಿ ಕನ್ನಡವನ್ನು ಬಳಸಿರುವುದರ ಬಗ್ಗೆ ಶ್ಲಾಘಿಸಿದರು.

- Advertisement -
- Advertisement -

Latest News

ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ ಸ್ಮಾರಕ ಭವನ

ಬೆಳಗಾವಿ- ಭಾರತದ ಶೂರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರು ಸನ್ ೧೮೯೨ ರಲ್ಲಿ ಕರ್ನಾಟಕದ ಬೆಳಗಾವಿಗೆ ಭೇಟಿ ಕೊಟ್ಟು ಅಕ್ಟೋಬರ್ ೧೬ ರಿಂದ ೨೭ ರ...
- Advertisement -

More Articles Like This

- Advertisement -
close
error: Content is protected !!
Join WhatsApp Group