- Advertisement -
ಮೈಸೂರಿನ ಸುಬ್ಬರಾಯನಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾಧ್ಯಕ್ಷರಾದ ಆರ್.ಶ್ರೀನಿವಾಸ್, ಸಮಾಜ ಸೇವಕ ಆರ್.ಪ್ರಕಾಶ್, ಭಾರತ ಭೀಮ್ ಸೇನೆಯ ದಿನೇಶ್ ಆರ್., ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್, ಕರ್ನಾಟಕ ರತ್ನ ಪ್ರಶಸ್ತಿ ವಿಜೇತರಾದ ಶ್ರೀಮತಿ ಹೇಮಾವತಿ ಉಮೇಶ್, ದೂರ, ಶ್ರೀಮತಿ ಶೋಭಾ, ಶ್ರೀಮತಿ ಕುಮಾರಿ, ಶ್ರೀಮತಿ ಮಂಜುಳಾ ಹಾಗೂ ಇತರರನ್ನು ಸನ್ಮಾನಿಸಲಾಯಿತು.