spot_img
spot_img

ಶಿಕ್ಷಕ ಕಬ್ಬೂರಗೆ “ಕನ್ನಡ ವಿಭೂಷಣ” ರಾಜ್ಯ ಮಟ್ಟದ ಪ್ರಶಸ್ತಿ

Must Read

ಬೆಳಗಾವಿ– ಸವದತ್ತಿ ನಗರದ ಸರಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ನಂ-6 ರಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎನ್.ಎನ್.ಕಬ್ಬೂರ ಇವರಿಗೆ 2022 ನೇ ಸಾಲಿನ “ಕನ್ನಡ ವಿಭೂಷಣ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ನಾಡಿನ ಸಮಾಚಾರ ಸೇವಾ ಸಂಘದ ಸಂಸ್ಥಾಪಕ ಬಸವರಾಜ ಉಪ್ಪಾರಟ್ಟಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತತ 15 ವರ್ಷಗಳ ಶಿಕ್ಷಣ ಕ್ಷೇತ್ರದಲ್ಲಿನ ಇವರ ಸೇವೆ, ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕಾ ಘಟಕದಲ್ಲಿ ನಿರ್ವಹಿಸುತ್ತಿರುವ ಕಾರ್ಯವೈಖರಿ ಮತ್ತು ಶಿಕ್ಷಕ-ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನೀಡುತ್ತಿರುವ ನಿಖರವಾದ ಮಾಹಿತಿಯನ್ನು ಪರಿಗಣಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ನಾಡಿನ ಸಮಾಚಾರ ಸೇವಾ ಸಂಘ (ರಿ), ಆಶ್ರಯ ಸೇವಾ ಸಂಘ (ರಿ) ಗೋಕಾಕ ಮತ್ತು ಯುವ ಕಾರ್ಯ ನಿರ್ವಹಿಸುವ ಪತ್ರಕರ್ತರ ಸಂಘ ಜಿಲ್ಲಾ ಘಟಕ ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 10 ರಂದು ರಂಗಾಯಣ ಸಭಾ ಭವನ ಧಾರವಾಡದಲ್ಲಿ ನಡೆಯುವ 75 ನೇ ಸ್ವಾತಂತ್ರ್ಯ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಕವಿ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಪ್ರತಿ ವರ್ಷ ಸಾಹಿತ್ಯ, ಸಂಗೀತ, ಕಲೆ, ಸಮಾಜ ಸೇವೆ, ಕ್ರೀಡೆ, ಪತ್ರಿಕೋದ್ಯಮ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

- Advertisement -
- Advertisement -

Latest News

ಕೆನಡಾ ಮೇಯರ್ ಗೆ  ಭಾರತದ ಸಂವಿಧಾನದ ಪ್ರತಿ

ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್...
- Advertisement -

More Articles Like This

- Advertisement -
close
error: Content is protected !!