ಡಾ.ಮೀರಾ ಕುಮಾರ್ ರವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ ಪ್ರಶಸ್ತಿ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಕರ್ನಾಟಕ ಲಲಿತಕಲಾ ಅಕಾಡೆಮಿಯ 2020ನೇ ಸಾಲಿನ ಗೌರವ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅಂತರಾಷ್ಟ್ರೀಯ ಖ್ಯಾತಿಯ ಮೈಸೂರು ಸಾಂಪ್ರದಾಯಿಕ ಚಿತ್ರಕಲಾವಿದೆ ಬೆಂಗಳೂರಿನ ಡಾ.ಮೀರಾ ಕುಮಾರ್ ಆಯ್ಕೆಯಾಗಿದ್ದಾರೆ. ಈ ಬಾರಿ ಸಾಂಪ್ರದಾಯಿಕ ಶೈಲಿಯಲ್ಲಿ ಸಾಧನೆ ಮಾಡಿದ ಮಹಿಳಾ ಕಲಾವಿದೆಯನ್ನು ಗೌರವ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುತ್ತಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಿ.ಮಹೇಂದ್ರ ತಿಳಿಸಿರುತ್ತಾರೆ.

ಇದಲ್ಲದೆ ಹಿರಿಯ ಕಲಾವಿದರಾದ ಮಂಗಳೂರಿನ ಗಣೇಶ್ ಸೋಮಯಾಜಿ ಮತ್ತು ಧಾರವಾಡದ ಬಿ.ಮಾರುತಿ ರವರಿಗೂ ಲಲಿತಕಲಾ ಗೌರವಕ್ಕೆ ಪಾತ್ರರಾಗಿರುತ್ತಾರೆ. 49ನೇ ವಾರ್ಷಿಕ ಕಲಾ ಬಹುಮಾನಕ್ಕೆ 10 ಕಲಾಕೃತಿಗಳನ್ನು ಆಯ್ಕೆಮಾಡಲಾಗಿದೆ .

ಕಲಾಕಸ್ತೂರಿ ಮೀರಾ ಕುಮಾರ್ ವರ್ಣ ಸಂಯೋಜನೆ ಹಾಗು ಸೂಕ್ಷ್ಮ ಕುಸುರಿ ಕಲೆಯಿಂದ ಗಮನ ಸೆಳೆಯುವ ಮೈಸೂರು ಚಿತ್ರಕಲೆ, ಭಾರತೀಯ ಸಾಂಪ್ರದಾಯಿಕ ಚಿತ್ರಕಲೆಯಲ್ಲೆ ಒಂದು ವಿಶಿಷ್ಟ ಪ್ರಕಾರವಾದ ಈ ಶೈಲಿ ನೋಡುಗರಿಗೆ ಒಂದು ತ್ರಿ – ಆಯಾಮದ ಅನುಭವ ನೀಡುತ್ತದೆ . ಕಲೆ – ಕೌಶಲ – ಭಕ್ತಿ ಮತ್ತು ವೈಭವಗಳ ಒಟ್ಟು ಮೊತ್ತವೇ ಆಗಿರುವ ಈ ಪ್ರಕಾರದ ಚಿತ್ರ ರಚನೆ ಸುಲಭದ ವಿಷಯವಲ್ಲ ಎನ್ನುವ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದೆ ಶ್ರೀಮತಿ ಮೀರಾಕುಮಾರ್ ಬೆಂಗಳೂರು ಕಲಾಮಂದಿರ ಸ್ಕೂಲ್ ಆಫ್ ಆರ್ಟ್ ಮೂಲಕ ಫೈನ್ ಆರ್ಟ್ ಡಿಪ್ಲೊಮಾ ಪಡೆದ ಕಲಾತಪಸ್ವಿ.

- Advertisement -

ಡಾ. ಮೀರಾ ಕುಮಾರ್ ಅವರ ಒಂದು ಕಲಾಕೃತಿ

ಜೊಸ್ಸೋ ವರ್ಕ್ ಎಂಬೋಸ್ ಮೊದಲಾದ ಹಲವು ಕ್ಲಿಷ್ಟಕರ ಹಂತಗಳಲ್ಲಿ ಮೈದೆಳೆಯುವ ಈ ಕಲೆಯಲ್ಲಿ ನೈಜತೆಗಾಗಿ ಚಿನ್ನದ ತಗಡನ್ನು ಉಪಯೋಗಿಸುವುದರಿಂದ ಭಾರಿ ವೆಚ್ಚದಾಯಕ . ಇವರ ಚಿತ್ರಗಳಲ್ಲಿ ಕಂಡು ಬರುವ ಹಿನ್ನೆಲೆಯ ‘ಪರದೆ’ ಚಿತ್ರಕ್ಕೊಂದು ಮೆರುಗು ನೀಡುತ್ತದೆ.

ರಾಜ್ಯ ಮಟ್ಟದ 25 , ರಾಷ್ಟ್ರ ಮಟ್ಟದ 10 , ಅಂತರಾಷ್ಟ್ರೀಯ ಮಟ್ಟದ 5 ಕಲಾಪ್ರದರ್ಶನಗಳಲ್ಲಿ ಪ್ರತ್ಯಕ್ಷ ಭಾಗಿ ಇವರ ಕಲಾ ಪ್ರೇಮಕ್ಕೆ ಸಾಕ್ಷಿ. ಕಲೆಯ ಅಧ್ಯಯನಕ್ಕೆ ಲಂಡನ್, ಪ್ಯಾರಿಸ್, ಆಸ್ಟ್ರಿಯಾ ದೇಶಗಳೂ ಸೇರಿದಂತೆ ಅನೇಕ ದೇಶ ವಿದೇಶಗಳ ಪ್ರವಾಸ. ಅಪರೂಪದ ಕಲಾಕೃತಿಗಳ ಸಂಗ್ರಹ ಇವರ ಮನೆ ಮನೆ ವಿಶ್ವಂಭರ ಕಲಾದೇಗುಲ . ‘ಕಲಾಕಸ್ತೂರಿ’ ಮುಂತಾದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಅಭಿಜಾತ ಕಲಾವಿದೆಯ ಅಪ್ರತಿಮ ಸಾಧನೆ ಗುರುತಿಸಿ ನ್ಯೂ ಕ್ರಿಶ್ಚಿಯನ್ ಯೂನಿವರ್ಸಿಟಿಯವರು ಗೌರವ ಡಾಕ್ಟರೇಟ್ ಪದವಿ ನೀಡಿದ್ದಾರೆ.

- Advertisement -
- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!