spot_img
spot_img

ಕಸಾಪ ನೂತನ ಅಧ್ಯಕ್ಷರಿಗೆ ಅಭಿನಂದನೆ ಜೊತೆಗೆ ಮನವಿ ಸಲ್ಲಿಸಿದ ಕಜಾಸ

Must Read

- Advertisement -

ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಷಿ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಅವರಿಗೆ ಕನ್ನಡ ಜಾಗೃತಿ ಸಮಿತಿಯಿಂದ ಅಭಿನಂದನೆ ಸಲ್ಲಿಸಿ ಮನವಿ ಸಲ್ಲಿಸಲಾಯಿತು.

ಸಾಹಿತಿ ಹಾಗೂ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಭೇರ್ಯ ರಾಮಕುಮಾರ್ ಹಾಗೂ ಕನ್ನಡಪರ ಚಿಂತಕ ಹಾಗೂ ಮೈಸೂರು ನಗರಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಅರವಿಂದ ಶರ್ಮ ಅವರು ಡಾ.ಮಹೇಶ್ ಜೋಷಿ ಅವರಿಗೆ ಕುವೆಂಪು ಅವರ ವಿಶ್ವ ಮಾನವ ಸಂದೇಶ ದ ಕೃತಿಯನ್ನು ನೀಡಿ ಅಭಿನಂದಿಸಿದರು. ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತಾಗಿ ಪರಿವರ್ತಿಸಲು ಕೋರುವ ಮನವಿ ಪತ್ರವನ್ನು ಅವರು ಈ ಸಂದರ್ಭದಲ್ಲಿ ಡಾ‌.ಜೋಷಿ ಅವರಿಗೆ ಸಲ್ಲಿಸಿದರು.

- Advertisement -

ಸಾಹಿತ್ಯ ಪರಿಷತ್ತಿಗೆ ಕನಿಷ್ಠ ಒಂದು ಕೋಟಿ ಜನರನ್ನು ಸದಸ್ಯರಾಗಿ ಮಾಡಬೇಕು. ಐದು ವರ್ಷಗಳ ಅವಧಿಯಲ್ಲಿ ನಡೆಯುವ ಐದು ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಪೈಕಿ ಎರಡು ಸಮ್ಮೇಳನದ ಅಧ್ಯಕ್ಷರನ್ನಾಗಿ ಮಹಿಳೆಯರನ್ನು ಆಯ್ಕೆ ಮಾಡಬೇಕು. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು. ಅಂತಹವರಿಗೆ ಜಿಲ್ಲಾ ಅಥವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು.

ಈ ಬಗ್ಗೆ ಪರಿಷತ್ತಿನ ನಿಯಮಾವಳಿಗೆ ತಿದ್ದುಪಡಿ ತರಬೇಕು. ನೂತನ ಸದಸ್ಯರ ನೋಂದಾವಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಬೇಕು. ಎರಡು ಚುನಾವಣೆಗಳಲ್ಲಿ ಮತದಾನ ಮಾಡದ ಮತದಾರರನ್ನು ಮತದಾರ ಪಟ್ಟಿಯಿಂದ ಕೈಬಿಡಬೇಕು.ರಾಜ್ಯದ ಮತದಾರರ ಪಟ್ಟಿಯನ್ನು ತುರ್ತು ಪರಿಶೀಲನೆ ಮಾಡಿ ಮೃತ ವ್ಯಕ್ತಿಗಳ ಹೆಸರನ್ನು ಕೈ ಬಿಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಾರ್ಯಗಳನ್ನು ಕೇಂದ್ರ ಸಮಿತಿಯೊಂದಿಗೆ ಸಮನ್ವಯಗೊಳಿಸಲು ಹೊಸ ವ್ಯವಸ್ಥೆ ಜಾರಿಗೊಳಿಸಬೇಕು.

ರಾಜ್ಯದ ಎಲ್ಲಾ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಆಯ್ಕೆಯನ್ನು ಚುನಾವಣೆ ಮೂಲಕವೇ ನಡೆಸಬೇಕು. ಚುನಾವಣೆಗಳಲ್ಲಿ ಮತದಾನ ಮಾಡದ ವ್ಯಕ್ತಿಗಳ ಸದಸ್ಯತ್ವವನ್ನು ರದ್ದು ಮಾಡಬೇಕು. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಭೇರ್ಯ ರಾಮಕುಮಾರ್ ಹಾಗೂ ಅರವಿಂದ ಶರ್ಮ ನೂತನ ಅಧ್ಯಕ್ಷರನ್ನು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

- Advertisement -

‌‌ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ, ಐಟಿಬಿಟಿ ಕಂಪೆನಿಗಳ ಲ್ಲಿ ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ತೋರಿಸಿದರೆ‌ ಅಂತಹವುಗಳ. ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಆರ್ಥಿಕ ವಾಗಿ ದುರ್ಬಲರಾದ ಸಾಹಿತಿಗಳಿಗೆ ಆರ್ಥಿಕ ಸಹಕಾರ, ಸೂಕ್ತ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದವರು ಮನವಿ ಪತ್ರದಲ್ಲಿ ಕೋರಿದ್ದಾರೆ.

- Advertisement -
- Advertisement -

Latest News

ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಅಭಿಯಾನ

ಸಿಂದಗಿ- ಪ್ರಸ್ತುತ ದಿನಮಾನಗಳಲ್ಲಿ ನಗರ ಪ್ರದೇಶದಲ್ಲಿ ವಿವಿಧ ಕಾರಣಗಳಿಂದ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ವಿಷಾದನಿಯ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಮತದಾನದ ಜಾಗೃತಿ ಮಾಡುವ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group