ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 110 ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ದಿನಾಂಕ 14 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಬೈಪಾಸ ರಸ್ತೆಯಲ್ಲಿರುವ ಎಸ್.ಎನ್.ವಿ.ವಿ.ಎಸ್ ಐಟಿಐ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪಟ್ಟಣದ ಮೂರುಸಾವಿರಮಠದ ಪೂಜ್ಯಶ್ರೀ.ಮ.ನ.ಪ್ರ.ಸ್ವ ಪ್ರಭುನೀಲಕಂಠ ಮಹಾಸ್ವಾಮಿಗಳು ವಹಿಸಲಿದ್ದಾರೆ. ಶಿಕ್ಷಣ ತಜ್ಞರಾದ ಗುರುಪುತ್ರಪ್ಪ ಬಸಪ್ರಭಪ್ಪ ತುರಮರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
‘ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರು’ ಎಂಬ ವಿಷಯದ ಮೇಲೆ ಪಟ್ಟಿಹಾಳ ಕೆ.ಬಿ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಎಸ್.ಎಂ. ಪಾಟೀಲ ಉಪನ್ಯಾಸ ನೀಡಲಿದ್ದಾರೆ. ಎಸ್.ಎನ್.ವಿ.ವಿ.ಎಸ್ ಐಟಿಐ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಎಸ್.ಡಿ. ಮಡಿವಾಳರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೈಲಹೊಂಗಲ ಕಸಾಪ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಪರಿಷತ್ತಿನ ಆಜೀವ ಸದಸ್ಯರು, ಸಾಹಿತಿಗಳು, ಕಲಾವಿದರು ಹಾಗೂ ಎಲ್ಲ ಕನ್ನಡ ಪ್ರೇಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಸಾಪ ಬೈಲಹೊಂಗಲ ತಾಲ್ಲೂಕಾ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.