ಇದೇ ದಿ.೯ ರಂದು ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲೂಕಿನ ಕುಡಚಿ ರಸ್ತೆಯ ಮುರಗೋಡ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸನ್ ೨೦೨೩-೨೪ ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ ಎಂ ಗಾಯತ್ರಿ ಅವರು, ಎಲ್ಲ ಜಿಲ್ಲಾ ಅಧ್ಯಕ್ಷರು ಹಾಗೂ ಗಡಿನಾಡು ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದಾರೆ.

