- Advertisement -
ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ಭೇಟಿ ಮಾಡಿ ಪರಿಷತ್ತಿನ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆಹ್ವಾನಿಸಿದರು .
ಇದೇ ವೇಳೆ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳಾಗಿ ಭಾಗವಹಿಸಲು ಕೋರಿದರು.
ಕಸಾಪ ಅಧ್ಯಕ್ಷರ ಆಹ್ವಾನಕ್ಕೆ ರಾಜ್ಯಪಾಲರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗ ಶೆಟ್ಟಿ, ಡಾ ಪದ್ಮಿನಿ ನಾಗರಾಜು ಗೌರವ ಕೋಶಾಧ್ಯಕ್ಷರಾದ ಬಿ ಎಂ ಪಟೇಲ್ ಪಾಂಡು ಉಪಸ್ಥಿತರಿದ್ದರು