ಕಿತ್ತೂರು ಉತ್ಸವದ ನಿಮಿತ್ತ ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Must Read

ಬೈಲಹೊಂಗಲ: ಗ್ಲೋಬಲ್ ವುಮೇನ್ರೈಸ್ ಫೌಂಡೇಶನ್ ಬೆಂಗಳೂರು ಇವರ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಚೆನ್ನಮ್ಮಾಜಿಯವರ ಐಕ್ಯ ಸ್ಥಳವಾದ ಬೈಲಹೊಂಗಲದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಆಯೋಜಿಸಲಾಗಿದೆ.

ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಕವನಗಳನ್ನು ಆಹ್ವಾನಿಸಲಾಗಿದೆ.

ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿಟಿಪಿ ಮಾಡಿಸಿ ಸ್ವವಿಳಾಸ, ಕಿರುಪರಿಚಯ, ಭಾವಚಿತ್ರ, ವಾಟ್ಸಪ್ ಮೊಬೈಲ್ ಸಂಖ್ಯೆಯೊಂದಿಗೆ ಸೆಪ್ಟೆಂಬರ್ 25ರ ಒಳಗಾಗಿ ಶ್ರೀ ಮೋಹನ ಬಸನಗೌಡ ಪಾಟೀಲ, ಮಾಜಿ ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, “ಬಸವ ನಿವಾಸ”, ಚನ್ನಮ್ಮನಗರ ಮೊದಲನೆಯ ಅಡ್ಡರಸ್ತೆ, ಬೈಲಹೊಂಗಲ- 591102, ಬೆಳಗಾವಿ ಜಿಲ್ಲೆ ಈ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9448920888 ಸಂಪರ್ಕಿಸಬೇಕೆಂದು ಗ್ಲೋಬಲ್ ವುಮೇನ್ರೈಸ್ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಡಾ. ಮನ್ಮತಯ್ಯ ಸ್ವಾಮಿ, ಕಾರ್ಯದರ್ಶಿ ಮಿಥುನ ವಿಠ್ಠಲ ಹುಗ್ಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group