ಕನ್ನಡ ಚಲನಚಿತ್ರಗಳು ಇತ್ತೀಚೆಗೆ ಜಗತ್ತಿನಾದ್ಯಂತ ಹೆಸರು ಮಾಡುತ್ತಿವೆ, ಇನ್ನು ಶೂಟಿಂಗ್ ಹಂತದಲ್ಲಿರುವ ಕೆಲವು ಚಿತ್ರಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲವನ್ನು ಸೃಷ್ಟಿಸಿವೆ. ಅವುಗಳಲ್ಲಿ ಆರ್. ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರವು ಒಂದು. ಇಬ್ಬರು ಬಿಗ್ ಸ್ಟಾರ್ ಗಳಾದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಅಭಿನಯ ಚಕ್ರವರ್ತಿ ಬಾದ್ ಶಾ ಕಿಚ್ಚ ಸುದೀಪ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಕಬ್ಜ ಚಿತ್ರವು ಈಗಾಗಲೇ ಪೋಸ್ಟರ್ ಗಳಿಂದ ಪ್ರೇಕ್ಷಕ ಪ್ರಭುಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹೆಚ್ಚಿಸುತ್ತಾ ಸಾಗಿದೆ. ಈಗ ಇದೇ ಚಿತ್ರದ ಹೊಸ ಸುದ್ದಿಗಳು ಹೊರಬಿದ್ದಿವೆ. ಉಪೇಂದ್ರರವರ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಈಗ ಕಿಚ್ಚ ಸುದೀಪ್ ಅವರ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.
ಪ್ಯಾನ್ ಇಂಡಿಯಾ ಹಿರೋಯಿನ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಸಿನಿಮಾ ರಸಿಕರ ನಿರೀಕ್ಷೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ.
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರಿದ್ದಾರೆ.