- Advertisement -
ಬೀದರ – ನಿರ್ಮಾಣ ಹಂತದಲ್ಲಿರುವ ಕಾಲೇಜಿನ ಕಟ್ಟಡದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ಬೀದರನಲ್ಲಿ ನಡೆದಿದೆ.
ಇರ್ಶಾದ್ ಇಸ್ಮಾಯಿಲ್ (10) ಬಾಲಕ ದುರಂತ ಸಾವು ಕಂಡಿದ್ದು ಆಟವಾಡುತ್ತಾ ಆಯ ತಪ್ಪಿ ನೂತನ ಸೆಪ್ಟಿಕ್ ಟ್ಯಾಂಕ್ ಗೆ ಬಿದ್ದಿದ್ದಾನೆ ಎನ್ನಲಾಗಿದೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಈ ಘಟನೆ ಸಂಭವಿಸಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಬಾಲಕನ ಸಾವು ಸಂಭವಿಸಿದೆ ಎಂದು ಗುತ್ತಿಗೆದಾರರ ಸೂರ್ಯಕಾಂತ್ ಅಲಮಾಜಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
- Advertisement -
ಗುತ್ತಿಗೆದಾರನ ಲೈಸೆನ್ಸ್ ಕಪ್ಪು ಪಟ್ಟಿಗೆ ಹಾಕಿ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದರು.
ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ನಂದಕುಮಾರ ಕರಂಜೆ, ಬೀದರ