ಕಿತ್ತೂರು-ಕರ್ನಾಟಕ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

Must Read

ಬೆಳಗಾವಿ: ಮುಂಬಯಿ-ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು.

ಸೋಮವಾರ ‌ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು-ಕರ್ನಾಟಕ ಘೋಷಣೆಯ ನಿರ್ಧಾರ ಪ್ರಕಟಿಸಿದ ಬಳಿಕ ಸಂಜೆ ಸಂಭ್ರಮಾಚರಿಸಲಾಯಿತು.

ಬೆಳಗಾವಿ ಸಂಸದರಾದ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ‌ ಮಾತನಾಡಿದ ಗಣ್ಯರು, ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರಕಾರ ಈಡೇರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.

ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಕೂಡ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ‌ನಡೆಸಿದರು.

Latest News

ಸಾವಿಲ್ಲದ ಶರಣರು ವ್ಯಾಕರಣದ  ಬೇಗೂರು ಮಲ್ಲಪ್ಪ

ಬಿ. ಮಲ್ಲಪ್ಪ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿನವರು. 1835ರಲ್ಲಿ ಮಲ್ಲಿಕಾರ್ಜುನಪ್ಪ ಮಲ್ಲಮ್ಮಾಜಿ ಎಂಬ ಲಿಂಗಾಯತ ಬಣಜಿಗ ದಂಪತಿಗಳಿಗೆ ಜನಿಸಿದರು. ಬಾಲ್ಯದಿಂದಲೂ ಮೈಸೂರು ಅರಮನೆಯ...

More Articles Like This

error: Content is protected !!
Join WhatsApp Group