spot_img
spot_img

ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ.

ಬೆಂಗಳೂರು: ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಪ್ರತಿ ಲೀಟರ್ ಹಾಲಿಗೆ ಕನಿಷ್ಠ 3 ರೂ.ಗಳನ್ನು ಹೆಚ್ಚಿಗೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಅವರು ಕೋರಿದ್ದಾರೆ.

- Advertisement -

ಅಮೂಲ್ ಸೇರಿದಂತೆ ದೇಶದ ವಿವಿಧ ಸಹಕಾರ ಮತ್ತು ಖಾಸಗಿ ಸಂಸ್ಥೆಗಳ ಹಾಲಿನ ಮಾರಾಟ ದರವನ್ನು ಈಗಾಗಲೇ ಹೆಚ್ಚಿಸಿದ್ದು, ನಂದಿನಿ ಹಾಲಿನ ಮಾರಾಟ ದರಕ್ಕೆ ತುಲನೆ ಮಾಡಿದಾಗ ಇತರೇ ಸಂಸ್ಥೆಗಳ ದರವು ಪ್ರತಿ ಲೀಟರ್‌ಗೆ ರೂ. 8 ರಿಂದ 10 ರೂ.ಗೆ ಹೆಚ್ಚಳವಾಗಿದೆ. ಹಾಲಿನ ಮಾರಾಟ ದರವು ಕನಿಷ್ಠ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲು ಮುಖ್ಯಮಂತ್ರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಹೆಚ್ಚಳ ಮಾಡಲಿರುವ 3 ರೂ.ಗಳಲ್ಲಿ ಕನಿಷ್ಠ ರೂ. 2 ನ್ನು ಹಾಲು ಉತ್ಪಾದಕರಿಗೆ ಮತ್ತು ಉಳಿದ 1 ರೂ.ನ್ನು ಹಾಲು ಉತ್ಪಾದಕರ ಸಹಕಾರಿ ಸಂಘ, ಹಾಲು ಒಕ್ಕೂಟ ಮತ್ತು ಹಾಲು ಮಾರಾಟಗಾರರಿಗೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕೆಎಂಎಫ್ ಹಾಗೂ ರಾಜ್ಯದಲ್ಲಿರುವ ಎಲ್ಲ 14 ಹಾಲು ಒಕ್ಕೂಟಗಳ ಒಟ್ಟಾರೆ ವಹಿವಾಟು 2019-20 ರಲ್ಲಿ 16,440.74 ಕೋಟಿ ರೂ. ಇದ್ದು, ಪ್ರಸಕ್ತ ಸಾಲಿಗೆ 19,732 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ. 2 ವರ್ಷಗಳ ಅವಧಿಯಲ್ಲಿ ಶೇ 20 ರಷ್ಟು ವಹಿವಾಟು ಹೆಚ್ಚಳವಾಗಿದ್ದು, 2022-23ನೇ ಸಾಲಿನಲ್ಲಿ ಒಟ್ಟಾರೆ 25 ಸಾವಿರ ಕೋಟಿ ರೂ. ತಲುಪುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಟ್ಟಡಕ್ಕೆ ಕೆಎಂಎಫ್‌ನಿoದ ನೀಡಲಾಗುತ್ತಿರುವ ಅನುದಾನವನ್ನು 3.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. 2020-21ನೇ ಸಾಲಿನಲ್ಲಿ 250 ಹಾಲು ಉತ್ಪಾದಕರ ಸಹಕಾರಿ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಸುಮಾರು 10.57 ಕೋಟಿ ರೂ. ಅನುದಾನ ನೀಡಲಾಗಿದ್ದು, 2021-22ನೇ ಸಾಲಿನಲ್ಲಿ 15.15 ಕೋಟಿ ರೂ.ಗಳ ಅನುದಾನವನ್ನು ಇದಕ್ಕೆ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಶು ಸಂಗೋಪನೆ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. 2019-20 ರಲ್ಲಿ ವಾರ್ಷಿಕವಾಗಿ ಕೆಎಂಎಫ್ 40-50 ಕೋಟಿ ರೂಪಾಯಿ ಈ ಯೋಜನೆಗಳಿಗೆ ನೀಡಲಾಗುತ್ತಿದ್ದು, ಮುಂದಿನ ಆಯವ್ಯಯದಲ್ಲಿ 50 ಕೋಟಿ ರೂ. ನೀಡುತ್ತಿರುವುದನ್ನು 80 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ಸಮಗ್ರ ಮಾರುಕಟ್ಟೆ ಅಭಿವೃದ್ಧಿ ಯೋಜನೆ ರೂಪಿಸಿದ್ದು, 2026-27ನೇ ಸಾಲಿಗೆ 133.84 ಲಕ್ಷ ಲೀಟರ್ ಹಾಲು ಶೇಖರಿಸುವ ಗುರಿಯನ್ನು ಹೊಂದಲಾಗಿದೆ. ಅದರಲ್ಲಿ 110 ಲಕ್ಷ ಲೀಟರ್ ಹಾಲು ಮತ್ತು ಹಾಲಿನ ಉತ್ಪನ್ನಗಳ ರೂಪದಲ್ಲಿ ಮತ್ತು ಉಳಿದ ಹಾಲನ್ನು ಹಾಲಿನ ಪುಡಿ ಪರಿವರ್ತನೆಗಾಗಿ ಮಾರಾಟ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನೆರೆಯ ರಾಜ್ಯಗಳ ನಗರ ಪ್ರದೇಶಗಳಾದ ಚೆನೈ, ಮುಂಬಯಿ, ಗೋವಾ, ಹೈದ್ರಾಬಾದ್, ಪುಣೆಗಳಲ್ಲಿ ಪ್ರತಿನಿತ್ಯ ನಂದಿನಿ 10 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ಮಾರಾಟದ ಜಾಲವನ್ನು ಇನ್ನಷ್ಟು ವಿಸ್ತರಿಸುವ ಉದ್ಧೇಶದಿಂದ ಮಹಾರಾಷ್ಟ್ರದ ವಿದರ್ಭ ಪ್ರಾಂತದಲ್ಲಿ ಹಾಲಿನ ಮಾರಾಟ ಪ್ರಾರಂಭಿಸಲಾಗಿದೆ. ಕೆಫೆ ಕಾಫೀ ಡೇ ಮಾದರಿಯಲ್ಲಿ ನಂದಿನಿ ಮಾದರಿಯಲ್ಲಿ ವಿನೂತನ ನಂದಿನಿ ಕೆಫೆ ಅನ್ನು ಈಗಾಗಲೇ ರಾಜ್ಯಾದ್ಯಂತ ಸ್ಥಾಪಿಸಲಾಗಿದೆ. ಮುಂದಿನ ವರ್ಷದಿಂದ ಬೇರೆ ಬೇರೆ ನಗರಗಳಲ್ಲಿ 100ಕ್ಕೂ ಅಧಿಕ ವಿನೂತನ ನಂದಿನಿ ಕೆಫೆ ಮ್ಹೂ ಸ್ಥಾಪಿಸುವ ಗುರಿ ಹೊಂದಲಾಗಿದೆ. ಅಮೇರಿಕಾ, ಆಸ್ಟ್ರೇಲಿಯಾ, ಅಪಘಾನಿಸ್ಥಾನ, ಭೂತಾನ್, ಸಿಂಗಾಪೂರ, ಬಹರೆನ್ ಮುಂತಾದ ವಿವಿಧ ದೇಶಗಳಿಗೆ 20 ಕೋಟಿ ಅಧಿಕ ಮೌಲ್ಯದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲಾಗಿದೆ. 2022-23 ರಲ್ಲಿ ಒಟ್ಟು 300 ಕೋಟಿ ರೂ. ಮೌಲ್ಯದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

ಕೆಎಂಎಫ್ ನಿಂದ ಪೂರೈಸಲಾಗಿರುವ ಪಶು ಆಹಾರ ದರದಲ್ಲಿ ಪ್ರತಿ ಟನ್‌ಗೆ ರೂ. 500 ರಿಂದ 2000 ರೂ.ಗಳವರೆಗೆ ವಿವಿಧ ಸಂದರ್ಭಗಳಲ್ಲಿ ರಿಯಾಯಿತಿ ನೀಡಲಾಗಿದೆ. ಕಳೆದ ಎರಡುವರೆ ವರ್ಷಗಳಲ್ಲಿ ಒಟ್ಟು 160 ಕೋಟಿ ರೂ.ಗಳಿಗಿಂತ ಹೆಚ್ಚಿನ ರಿಯಾಯಿತಿ ನೀಡಲಾಗಿದೆ. ಧಾರವಾಡ ಮತ್ತು ಗುಬ್ಬಿ ಪಶು ಆಹಾರ ಘಟಕಗಳಲ್ಲಿ ಆಹಾರ ಉತ್ಪಾದನಾ ಸಾಮರ್ಥ್ಯವನ್ನು ತಲಾ 300 ಟನ್‌ನಂತೆ ಒಟ್ಟು 600 ಟನ್ ಪ್ರತಿದಿನಕ್ಕೆ ಹೆಚ್ಚಿಸಲಾಗಿದೆ. ಇದರೊಂದಿಗೆ ಕೆ.ಆರ್ ಪೇಟೆ, ಮಂಡ್ಯ, ಅರಕಲಗೂಡು, ಹಾಸನ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಿ ಈಗಾಗಲೇ ಪ್ರತಿ ತಿಂಗಳಲ್ಲಿ 45 ಸಾವಿರ ಟನ್ ಪೂರೈಕೆಯಾಗುತ್ತಿದ್ದ ಪಶು ಆಹಾರ ಪ್ರಮಾಣವನ್ನು 65 ಸಾವಿರ ಟನ್‌ಗೆ ಹೆಚ್ಚಿಸಲಾಗಿದೆ. ಈ ಗುರಿಯನ್ನು ಮುಂದಿನ ಸಾಲಿಗೆ 75 ಸಾವಿರ ಟನ್ ಗುಣಮಟ್ಟದ ಪಶು ಆಹಾರ ಪೂರೈಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

- Advertisement -
- Advertisement -

Latest News

ಭಕ್ತಿ ಎಂಬುದು ಪರಮ ಪವಿತ್ರ ಪ್ರೇಮ – ಬಸವಾನಂದ ಸ್ವಾಮೀಜಿ

ಸಿಂದಗಿ: ಎಲ್ಲಕ್ಕಿಂತ ದೊಡ್ಡ ಸಂಪತ್ತು ಭಕ್ತಿಯಲ್ಲಿ ಸಿಗುತ್ತದೆ. ಭಕ್ತಿ ಎಂಬುದು ಪರಮ ಪವಿತ್ರವಾದ ಪ್ರೇಮ ವಾಗಿದೆ. ಕಾರಣ ಎಲ್ಲರೂ ಗುರುವಿನಲ್ಲಿ ಶ್ರದ್ಧಾ ಭಕ್ತಿ ಇಟ್ಟರೆ ಜೀವನ...
- Advertisement -

More Articles Like This

- Advertisement -
close
error: Content is protected !!
Join WhatsApp Group