ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

Must Read

ಗೋಕಾಕ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ, ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷರು.

ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೃಹ, ಜಲಸಂಪನ್ಮೂಲ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಗಳ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಉತ್ತಮ ಸಂಸದೀಯ ಪಟು ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group