spot_img
spot_img

ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಎಎಸ್ಐ ನದಾಫ್

Must Read

- Advertisement -

ಮೂಡಲಗಿ: ವಿದ್ಯಾರ್ಥಿಗಳು ಕಾನೂನು ಅರಿತುಕೊಂಡು ಸಮಾಜದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಒಳಗಾಗದೆ ಉತ್ತಮ ಭವಿಷ್ಯತ್ತನ್ನು ನಿರ್ಮಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರಾದ ಎಮ್.ಬಿ.ನದಾಫ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು..

ಅವರು ಶನಿವಾರದಂದು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಕಾನೂನು ಅರಿವು” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೊಲೀಸ್ ಠಾಣೆಯ ಮುಖ್ಯ ಪೇದೆಯಾದ ನಾಗಪ್ಪ ಒಡೆಯರ್ ಮಾತನಾಡಿ, ಪೊಲೀಸ್ ವ್ಯವಸ್ಥೆ ಹಾಗೂ ಅದರ ಅಧಿಕಾರ ವ್ಯಾಪ್ತಿ ಮತ್ತು ಕಾರ್ಯಗಳ ಕುರಿತು ವಿವರವಾಗಿ ತಿಳಿಸಿದ ಅವರು ಪ್ರಸ್ತುತ ತಂತ್ರಜ್ಞಾನವನ್ನು ಮೊಬೈಲ್, ಇಂಟರ್ನೆಟ್ ಹಾಗೂ ಇತರೆ ಹೊಸ ಹೊಸ ಆವಿಷ್ಕಾರಗಳನ್ನು ಬಳಸಿಕೊಂಡು ಯುವಕರು ಹಲವಾರು ಅಪರಾಧಿಕ ಚಟುವಟಿಕೆಗಳಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಬಹಳ ಎಚ್ಚರಿಕೆಯಿಂದ ಬಳಸಬೇಕು ಎಂದರು. ಯಾವುದಾದರೂ ಅಪರಾಧ ನಡೆಯುವಂಥ ಸಂದರ್ಭ ಕಂಡುಬಂದಲ್ಲಿ, ಅದರ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸುವುದರ ಮೂಲಕ ಅಂತಹ ಅಪರಾಧಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

- Advertisement -

ಕಾಲೇಜಿನ ಪ್ರಾಂಶುಪಾಲ ಶಾನೂರಕುಮಾರ ಗಾಣಿಗೇರ ಮಾತನಾಡಿ, ಪೊಲೀಸ್ ಇಲಾಖೆ ಯಾವಾಗಲೂ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಹಾಗೂ ಅದರ ರಕ್ಷಣೆಗಾಗಿ ಹಗಲಿರುಳೆನ್ನದೆ ಸೇವೆಯನ್ನು ಸಲ್ಲಿಸಲು ಸಿದ್ಧವಾಗಿರುತ್ತದೆ. ಹೀಗಾಗಿ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಶ್ವಿನಿ ಎಸ್, ರಾಧಾ ಎಮ್. ಎನ್, ರಾಜೇಂದ್ರ ಆಸಂಗಿ, ಅರುಣ ಕಡಾಡಿ, ಎಸ್.ಎಮ್.ನದಾಫ್, ನಂದೀಶ ಕರಾಳೆ, ಚೇತನ್ ರಾಜ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಭಾರತಿ ದೇವನಗಳ ನಿರೂಪಿಸಿದರು, ಪ್ರೇಮಾ ದೊಡಮನಿ ಪರಿಚಯಿಸಿದರು, ಜ್ಯೋತಿ ನಾಗಣ್ಣವರ ಹಾಗೂ ಶಶಿಕಲಾ ಕೊಡತೆ ಸ್ವಾಗತಿಸಿದರು ಹಾಗೂ ಕಲ್ಪನಾ ಮದ್ಲೂರು ವಂದಿಸಿದರು.

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group