spot_img
spot_img

ಆ.15 ರಂದು ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಆಗಮಿಸಲು ಕೊಳ್ಳೂರ ಕರೆ

Must Read

ಸಿಂದಗಿ: ಆ.15 ಕ್ಕೆ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಅಮೃತಮಹೋತ್ಸವದ ಸಂಭ್ರಮದ ಆಚರಣೆಯ ಅಂಗವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ ಸಮಿತಿಯು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಆವರಣದಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಸ್ವಾತಂತ್ರ್ಯ ಹೋರಾಟಗಾರರು ನಮ್ಮ ದೇಶಕ್ಕೆ ಸಾವಿರಾರು ಮಹಾನ ನಾಯಕರು, ಯೋಧರು, ಜೀವವನ್ನು ಬಲಿಕೊಟ್ಟು ಸ್ವಾತಂತ್ರ್ಯವನ್ನು ತಂದು ಕೊಟ್ಟಿರುವ ಈ ಪವಿತ್ರವಾದ 75ನೇ ವರ್ಷದ ಅಮೃತ ಮಹೋತ್ಸವದ ಸಮಯದಲ್ಲಿ ಎಲ್ಲ ಮಡಿದ ನಾಯಕರನ್ನು, ಹೋರಾಟಗಾರರನ್ನು ಸ್ಮರಿಸಿ, ನಮಿಸುವ, ಗೌರವ ಸಲ್ಲಿಸುವ ಕಾಂಗ್ರೆಸ ಪಕ್ಷ ಸ್ವಾತಂತ್ರ್ಯಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರ ಬೆನ್ನೆಲುಬಾಗಿ ನೀಡಿರುವ ಸಾಧನೆ ಅಗಾಧವಾಗಿದೆ ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ರಾಜ್ಯದ ಮೂಲೆ ಮೂಲೆಯಿಂದಲು ಬೆಂಗಳೂರಿಗೆ ಬಂದು ಸಂಗೊಳ್ಳಿರಾಯಣ್ಣ ಸಿಟಿ ರೆಲ್ವೆನಿಲ್ದಾಣ ಬೆಂಗಳೂರು ಇಲ್ಲಿಂದ ಪಾದಯಾತ್ರೆ ಮಾಡುವ ಮೂಲಕ ದೇಶದ ಧ್ವಜವನ್ನು ಹಿಡಿದು ಈ ಸ್ವಾತಂತ್ರ್ಯೋತ್ಸವಕ್ಕಾಗಿ ಸ್ಮರಣೆ ಹಾಗೂ ಗೌರವ ನೀಡುವ ಕಾರ್ಯಕ್ರಮಕ್ಕೆ ಸಿಂದಗಿ ಮತಕ್ಷೇತ್ರದಿಂದ ಕಾಂಗ್ರೆಸ ಪಕ್ಷದ ಮುಖಂಡರು, ಹಿರಿಯರು, ಯುವಕರು, ಮಹಿಳೆಯರು ಆ. 15 ರಂದು ಮದ್ಯಾಹ್ನ 2 ಗಂಟೆಗೆ ಬೆಂಗಳೂರಿನಲ್ಲಿ ಜರುಗುವ ಈ ಕಾರ್ಯಕ್ರಮಕ್ಕೆ ತಾವೂಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಬೇಕೆಂದು ಕೆ.ಪಿ.ಸಿ.ಸಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಪತ್ರಿಕಾ ಪ್ರಕಟನೆಯ ಮೂಲಕ ಕರೆ ನೀಡಿದ್ದಾರೆ.

ಆ. 22 ರಂದು ಸಿಂದಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 75 ಕಿ.ಮೀ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಿಂದಗಿ ಮತಕ್ಷೇತ್ರದ ಎಲ್ಲ ಗ್ರಾಮಗಳಿಗೆ ದ್ವಜವನ್ನು ಹಿಡಿದು ಹೆಜ್ಜೆ ಹಾಕುವ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿರುತ್ತದೆ. ಆದ್ದರಿಂದ ಕಾಂಗ್ರೆಸ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರಿಗೆ ತಿಳಿಸುವದೆನೆಂದರೆ ಈ ಪಾದಯಾತ್ರೆಯ ಸಂಪೂರ್ಣ ವಿವರವನ್ನು ಪಕ್ಷದ ಕಾರ್ಯಾಲಯದಿಂದ ತಿಳಿಸಲಾಗುವದು. ಎಂದು ತಿಳಿಸಿದ್ದಾರೆ.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!