spot_img
spot_img

ಕನ್ನಡ ಜ್ಯೋತಿಗೆ ಅದ್ದೂರಿ ಸ್ವಾಗತ ಕೋರಲು ಕೂಚಬಾಳ ವಿನಂತಿ

Must Read

ಸಿಂದಗಿ: ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಶಿಷ್ಟವಾಗಿ ಆಚರಿಸಲು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ಜಾಥಾವು ಇಡೀ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಸಿಂದಗಿ ನಗರಕ್ಕೆ ದಿ. 6 ರಂದು 12-00 ಗಂಟೆಗೆ ಆಗಮಿಸುತ್ತಿದ್ದು ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಕನ್ನಡಾಂಬೆ ವೃತ್ತದಲ್ಲಿ ಸ್ವಾಗತಿಸಲಾಗುವುದು ಕಾರಣ ತಾಲೂಕಿನ ಕನ್ನಡ ಮನಸ್ಸು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜಶೇಖರ ಕೂಚಬಾಳ ಮನವಿ ಮಾಡಿಕೊಂಡರು.

ಪಟ್ಟಣದ ಡಾ. ಅಂಬೇಡ್ಕರ ಭವನದ ಆವರಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,  ಜಾನಪದ ತಂಡಗಳೊಂದಿಗೆ ಕನ್ನಡಾಂಬೆಯ ಮೆರವಣಿಗೆಯನ್ನು ಎಚ್.ಜಿ.ಕಾಲೇಜವರೆಗೆ  ಹಮ್ಮಿಕೊಳ್ಳಲಾಗಿದೆ.

ಶಾಸಕ ರಮೇಶ ಭೂಸನುರ ಅವರು ಮೆರವಣೆಗೆ ಚಾಲನೆ ನೀಡಲಿದ್ದಾರೆ. ಕನ್ನಡಪರ ಸಂಘಟನೆಗಳು, ರೈತ ಸ0ಘಟನೆಗಳು, ಕಾರ್ಮಿಕ ಸಂಘಟನೆಗಳು, ವಿದ್ಯಾ ಸಂಸ್ಥೆಗಳು, ಶ್ರೀಮಠಗಳು, ಸ್ತ್ರೀಶಕ್ತಿ ಸಂಘಟನೆಗಳು ಇನ್ನಿತರ ಎಲ್ಲ ಕನ್ನಡ ಸಂಘ-ಸಂಸ್ಥೆಗಳು ಮತ್ತು ನಗರದ ಹಿರಿಯರು ಮತ್ತು ಗಣ್ಯ ಮಾನ್ಯರು, ಸಾಹಿತ್ಯಾಭಿಮಾನಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರು ಇದರಲ್ಲಿ ಪಾಲ್ಗೊಂಡು ಕನ್ನಡ ರಥಕ್ಕೆ ಭವ್ಯ ಸ್ವಾಗತವನ್ನು ಕೋರಿ ಬೀಳ್ಕೊಡುವಂತೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜಶೇಖರ ಕೂಚಬಾಳ ಅವರು ವಿನಂತಿಸಿದರು.

ಈ ಸಂದರ್ಭದಲ್ಲಿ ಕಸಾಪ ಪದಾಧಿಕಾರಿಗಳಾದ ಎಂ.ಎ.ಖತೀಬ, ಶಿಲ್ಪಾ ಕುದರಗೊಂಡ, ರಮೇಶ ಪೂಜಾರಿ, ಶಾರದಾ ಮಂಗಳೂರ, ಪಂಡಿತ ಯಂಪೂರೆ, ಖಾದರ ವಾಲಿಕರ, ಶಿವು ಬಡಾನವರ, ಶೈಲಜಾ ಸ್ಥಾವರಮಠ, ಎನ್.ಎಂ.ಚಪ್ಪರಬಂದ ಸೇರಿದಂತೆ ಅನೇಕರು ಇದ್ದರು.

- Advertisement -
- Advertisement -

Latest News

ಉಂಡು ಮಲಗಿದ ಮೇಲೂ ಗಂಡ ಹೆಂಡಿರ ಜಗಳ !

ಸಂಸಾರದ ಬಂಡಿ ಸರಾಗವಾಗಿ ಸಾಗಬೇಕಾದರೆ ಗಂಡ ಹೆಂಡತಿ ಎನ್ನುವ ಎರಡು ಗಾಲಿಗಳು ಸಮಸಮವಾಗಿ ಚಲಿಸಬೇಕು. ಎರಡೂ ಗಾಲಿಗಳಿಗೆ ಪ್ರಾಧಾನ್ಯತೆಯಿದೆ. ಒಂದು ಹೆಚ್ಚು ಒಂದು ಕಡಿಮೆ ಇಲ್ಲ....
- Advertisement -

More Articles Like This

- Advertisement -
close
error: Content is protected !!