ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ

Must Read

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು.

ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ,  ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕೃತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವುದರಿಂದ ನಮ್ಮಲ್ಲಿ ನಾಡು ನುಡಿಯ ಬಗ್ಗೆ ಚೈತನ್ಯ ಅಭಿಮಾನ ಮೂಡಿಸುತ್ತದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡು, ಕನ್ನಡ ಬಾಷೆ ಕಾವೇರಿಯಿಂದ ಗೋದಾವರಿಯವರೆಗೆ ಹಬ್ಬಿದ ನಾಡು ಗಂಗ ಕದಂಬ ರಾಷ್ಟ್ರಕೂಟ ಹೊಯ್ಸಳ ಚಾಲುಕ್ಯರಂತಹ ಅಪ್ರತಿಮ ರಾಜರನ್ನು ಕಂಡ ನಮ್ಮ ಹೆಮ್ಮೆಯ ನಾಡು ಕಲೆ ಸಾಹಿತ್ಯ ಸಂಸ್ಕೃತಿಗೆ ಹೆಸರುವಾಸಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ  ಗ್ರಾ.ಪಂ ಅಭಿವೃಧ್ಧಿ ಅಧಿಕಾರಿ ವೀರಭದ್ರ ಗುಂಡಿ, ಗ್ರಾಮ ಲೆಕ್ಕಾಧಿಕಾರಿ ಎಸ್.ಬಿ. ಪಾಶ್ಚಾಪುರೆ ಶಿಕ್ಷಕರಾದ ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ, ಶೀಲಾ ಕುಲಕರ್ಣಿ, ಪುಷ್ಪಾ ಭರಮದೆ, ಲಕ್ಷ್ಮೀ ಹೆಬ್ಬಾಳ, ಜ್ಯೋತಿ ಉಪ್ಪಾರ, ಮಹಾದೇವ ಗೋಮಾಡಿ, ಶಂಕರ ಲಮಾಣಿ, ಕಿರಣ ಭಜಂತ್ರಿ, ರೂಪಾ ಗದಾಡಿ, ಶಿವಲೀಲಾ ಹಣಮನ್ನವರ, ಖಾತೂನ ನದಾಫ, ಹೊಳೆಪ್ಪ ಗದಾಡಿ ಉಪಸ್ಥಿತರಿದ್ದರು.

ಎಲ್ಲಾ ವಿದ್ಯಾರ್ಥಿಗಳು ಕನ್ನಡನಾಡಿನ ಗಾಯನ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಯಶಸ್ವಿಗೊಳಿಸಿದರು.

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group