ದಾಳಿ ಮಾಡಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು
ಬೀದರ: ಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ಪ್ರತಿಭಟನೆ ನಡೆಸಿದರು.
ಭಾಲ್ಕಿ ಪಟ್ಟಣದಲ್ಲಿ ಸೀರೆ ಹಂಚುತ್ತಿದ್ದ ಈಶ್ವರ ಖಂಡ್ರೆ ಕಾರ್ಯಕರ್ತರು. ಈ ವೇಳೆ ದಾಳಿ ನಡೆಸಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿ.ಕೆ.ಸಿದ್ರಾಮ ಮತ್ತು ಕಾರ್ಯಕರ್ತರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಸೀರೆ ಹಂಚಲು ತಂದಿದ್ದ ವಾಹನಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು. ಕೆಲವು ಕಾಲ ಉದ್ವಿಘ್ನ ಪರಿಸ್ಥಿತಿ ಉಂಟಾಯಿತು.
ಘಟನೆ ಸಂಬಂಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ದಿ.ಭೀಮಣ್ಣ ಖಂಡ್ರೆಯವರ ಹೆಸರಿಗೆ ಮಸಿ ಬಳಿಯುತ್ತಿರುವ ಈಶ್ವರ ಖಂಡ್ರೆಗೆ ಧಿಕ್ಕಾರ ಎಂದು ಘೋಷಣೆ ಕೂಗಿದ ಕಾರ್ಯಕರ್ತರು ನಹಿ ಚಲೇಗಿ ಗೂಂಡಾಗರ್ದಿ ನಹಿ ಚಲೇಗಿ ಎಂದು ಘೋಷಣೆ ಹಾಕುತ್ತ ಪಾದಯಾತ್ರೆ ಮಾಡಿದರು.
ಸೀರೆ ಹಂಚುತ್ತಿರುವ ಈಶ್ವರ ಖಂಡ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು.
ವರದಿ: ನಂದಕುಮಾರ ಕರಂಜೆ, ಬೀದರ