- Advertisement -
ಸಿಂದಗಿ: ದೆಹಲಿಯಲ್ಲಿ ನಡೆಯುವ 74ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ಎನ್.ಸಿ.ಸಿ. ಕೆಡೆಟ್ ವಿದ್ಯಾರ್ಥಿ ಕೃಷ್ಣಾ ಜಂಬೆನಾಳ ಆಯ್ಕೆಯಾಗಿ ನಮ್ಮ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಎನ್.ಸಿ.ಸಿ. ಅಧಿಕಾರಿ ಲೆಫ್ಟನೆಂಟ್ ಡಾ. ರವಿ.ಲಮಾಣಿ ತಿಳಿಸಿದ್ದಾರೆ.
ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಪೂಜ್ಯಶ್ರೀ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಪ್ರಾಚಾರ್ಯ ಪ್ರೊ.ಡಿ.ಎಮ್.ಪಾಟೀಲ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.