spot_img
spot_img

ಅ.೩ರಂದು ಲಿಂ. ಸಿದ್ಧಲಿಂಗ ಶ್ರೀಗಳ ಪುಣ್ಯಸ್ಮರಣೆ ಮತ್ತು ಗದ್ದುಗೆ ಉದ್ಘಾಟನೆ

Must Read

spot_img
- Advertisement -

ಮೂಡಲಗಿ: ಹಲವು ವೈಶಿಷ್ಟ್ಯ ಗಳಿಂದ ಕೂಡಿದ ತಾಲೂಕಿನ ಅರಭಾವಿಯ ಜಗದ್ಗುರು ಶ್ರೀ ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧಸಂಸ್ಥಾನ ಮಠದ ಹನ್ನೊಂದನೆಯ ಪೀಠಾಧಿಪತಿಗಳಾಗಿದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆ, ಗದ್ದುಗೆಯ ಉದ್ಘಾಟನೆ ಮತ್ತು ಸಂಸ್ಮರಣ ಸಂಪುಟ ಬಿಡುಗಡೆ ಸಮಾರಂಭ ಗುರುವಾರ ಅ.೩ರಂದು ಮುಂಜಾನೆ ೧೦.೩೦ ಗಂಟೆಗೆ ಗದಗ-ಡಂಬಳದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀಮಠದ ಶ್ರೀ ಗುರುಬಸವಲಿಂಗ ಮಹಾಸ್ವಾಮೀಜಿಗಳು ತಿಳಿಸಿದರು.

ಸೋಮವಾರದಂದು ಅರಭಾವಿ ಮಠದಲ್ಲಿ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆ, ಗದ್ದುಗೆಯ ಉದ್ಘಾಟನೆ ಮತ್ತು ಸಂಸ್ಮರಣ ಸಂಪುಟ ಬಿಡುಗಡೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಶ್ರೀ ಮಠದಲ್ಲಿ ಸುರ್ಧೀಘ ೪೫ ವರ್ಷಗಳವರೆಗೆ ಲಿಂಗಪೂಜಾ ನಿಷ್ಠರಾಗಿ ಧಾರ್ಮಿಕ, ಸಾಹಿತ್ಯ, ಶೈಕ್ಷಣಿಕ, ಜ್ಞಾನದಾಸೋಹದೊಂದಿಗೆ ಅನ್ನದಾಸೋಹ ನಡೆಸಿ ಸಮಸ್ತ ಭಕ್ತರ ಹೃದಯದಲ್ಲಿ ನೆಲೆಸಿದ್ದರು. ಪೂಜ್ಯ ಶ್ರೀಗಳು ಲಿಂಗೈಕ್ಯರಾಗಿ ಒಂದು ವರ್ಷ ಗತಿಸಿದ ನೆನಪಿಗಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಎಂದು ಹೇಳಿದರು.

ಕಡಕೋಳದ ಶ್ರೀ ಸಚ್ಚಿದಾನಂದ ಶ್ರೀಗಳು, ಬೆಲ್ಲದ ಬಾಗೇವಾಡಿಯ ಶ್ರೀ ಶಿವಾನಂದ ಶ್ರೀಗಳು, ಹುಕ್ಕೇರಿಯ ಶ್ರೀ ಶಿವಬಸವ ಶ್ರೀಗಳು, ಶೇಗುಣಸಿಯ ಡಾ.ಮಹಾಂತ ಪ್ರಭು ಶ್ರೀಗಳ ಸಮ್ಮುಖ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ “ಪುಣ್ಯಾರಣ್ಯ ಪುಷ್ಪ” ಸಂಸ್ಮರಣ ಸಂಪುಟ ಬಿಡುಗಡೆಗೊಳಿಸುವರು, ಮುಖ್ಯ ಅತಿಥಿಗಳಾಗಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ, ಅರಭಾವಿ ಶಾಸಕ ಹಾಗೂ ಬೆಮ್ಯೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ನಿವೃತ್ತ ಪ್ರಾದೇಶಿಕ ಆಯುಕ್ತ ಎಮ್.ಜಿ.ಹಿರೇಮಠ ಭಾಗವಹಿಸುವರು ಎಂದು ಶ್ರೀ ಗುರುಬಸವಲಿಂಗ ಮಹಾಸ್ವಾಮಿಜಿಗಳು ತಿಳಿಸಿದರು.

- Advertisement -

ಗೋಕಾಕದ ಡಾ.ಸಿ.ಕೆ.ನಾವಲಗಿ ಮಾತನಾಡಿ, ಅ.೩ ರಂದು ಅರಭಾವಿ ಶ್ರೀ ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಗುರುಬಸವಲಿಂಗ ಮಹಾಸ್ವಾಮಿಜಿಗಳ ನೇತೃತ್ವದಲ್ಲಿ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಪ್ರಥಮ ಪುಣ್ಯಸ್ಮರಣೆ, ಗದ್ದುಗೆಯ ಉದ್ಘಾಟನೆ ಮತ್ತು ಸ್ಮರಣ ಸಂಪುಟ ಬಿಡುಗಡೆ ಕಾರ್ಯಕ್ರಮ ಜರುಗಲಿದ್ದು. ಶ್ರೀಮಠದ ಭಕ್ತಾದಿಗಳು ಭಾಗವಹಿಸಿ ಶ್ರೀಗಳ ಕೃಫೆಗೆ ಪಾತ್ರರಾಗಬೇಕೆಂದರು.

ಈ ಸಂದರ್ಭದಲ್ಲಿ ಶ್ರೀಮಠಧ ಸದ್ಭಕ್ತರಾದ ಚಂದ್ರಪ್ಪ ಘಿವಾರಿ, ಸದಾನಂದ ಅಂಗಡಿ, ಸಿದ್ಧಲಿಂಗಪ್ಪ ಅಂಗಡಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬ

ಸೀರೆ ತೊಟ್ಟುಕೊಂಡು ಬಂದ ಬಾಲಕಿಯರು, ಮದುವಣಗಿತ್ತಿಯಂತೆ ಕಂಗೊಳಿಸಿದ ಶಾಲಾ ಆವರಣ. ಎಲ್ಲರ ತಲೆ ಮೇಲೊಂದು ಕಲರ್ ಕಲರ್ ಪೇಪರ್ ಟೋಪಿ. ಹೌದು, ಹೀಗೆ ಶಾಲೆಯಲ್ಲೊಂಥರಾ ಹಬ್ಬದ...
- Advertisement -

More Articles Like This

- Advertisement -
close
error: Content is protected !!
Join WhatsApp Group