ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ವೈದ್ಯೆ ಇರ್ಷಾನಾ ಕರ್ತವ್ಯ ಲೋಪದ ಆರೋಪದ ಮೇರೆಗೆ ಅಮಾನತುಗೊಂಡಿದ್ದಾರೆ.
ಅಮಾನತು ಮಾಡಿ ಆದೇಶ ಹೊರಡಿಸಿದ ಆರೋಗ್ಯ ಸೇವೆಗಳ ಶಿಸ್ತು ಪ್ರಾಧಿಕಾರಿ ಶಿವಕುಮಾರ ಅವರು,ಇತ್ತೀಚೆಗೆ ಆಸ್ಪತ್ರೆಯಲ್ಲಿ ಮಗು ಜನನದ ನಂತರ ತಾಯಿ ತೀವ್ರ ರಕ್ತಸ್ರಾವದಿಂದ ಸಾವನಪ್ಪಿದ್ದ ಘಟನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ.
ಆ.8ರಂದು ಮಗುವಿಗೆ ಜನ್ಮ ನೀಡಿ ತಾಯಿ ಯೊಬ್ಬಳು ರಕ್ತಸ್ರಾವದಿಂದ ಸಾವನಪ್ಪಿದ್ದಳು.ರೋಗಿಗೆ ಸೂಕ್ತ ಚಿಕಿತ್ಸೆ ನೀಡದೇ ಡಾ. ಇರ್ಷಾನಾ ಅವರಿಂದ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆಗಿದೆ ಎಂಬ ಆರೋಪ ಕೇಳಿಬಂದಿದೆ.
ಡಾ.ಇರ್ಷಾನಾ ಕರ್ತವ್ಯದಲ್ಲಿ ನಿರ್ಲಕ್ಷ ತೋರಿರುವ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದ್ದು ಈ ಹಿನ್ನೆಲೆ ಶಿಸ್ತು ಪ್ರಾಧಿಕಾರಿ ಮತ್ತು ಆಯುಕ್ತ ಶಿವಕುಮಾರ ಕೆ.ಬಿ. ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
ವರದಿ : ನಂದಕುಮಾರ ಕರಂಜೆ, ಬೀದರ

