ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ

Must Read

ಮೂಡಲಗಿ: ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು.

ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಪಾಲಕರಿಗೆ ತಿಳಿವಳಿಕೆ ನೀಡಬೇಕು ಮತ್ತು ಬಾಲ್ಯ ವಿವಾಹ ತಡೆಗಟ್ಟಲು ಸಮುದಾಯದವರ ಪಾತ್ರ ಬಹಳ ಮುಖ್ಯವಾಗಿದೆ ಎಂದ ಅವರು ಬಾಲ್ಯ ವಿವಾಹದ ದುಷ್ಪರಿಣಾಮವನ್ನು ಮತ್ತು ಕಾನೂನುಗಳನ್ನು ವಿವರಿಸಿದರು.

ಸಮಾರಂಭದಲ್ಲಿ ಪಟ್ಟದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಪಾಲಕರು, ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತಿತರು ಭಾಗವಹಿಸಿದರು.
ಅಂಗನವಾಡಿ ಕಾರ್ಯಕರ್ತೆ ಮಾಲತಿ ಸಪ್ತಸಾಗರ ನಿರೂಪಿಸಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group