ಸಿಂದಗಿ: ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಿಂದಗಿ ಮತ್ತು ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವ್ಹಿಲ್ ಮತ್ತು ಜೆಎಂಎಫ್‌ಸಿ ಮಾನ್ಯ ನ್ಯಾಯಾಧೀಶರಾದ ಆಯ್.ಪಿ.ನಾಯಕ ಅವರು ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಎಸ್.ಬಿ.ದೊಡಮನಿ, ಸಹಾಯಕ ಸರಕಾರಿ ವಕೀಲರಾದ ಆನಂದ ರಾಠೋಡ, ಅಪರ ಸರಕಾರಿ ವಕೀಲರಾದ ಎಂ.ಎಸ್.ಪಾಟೀಲ, ಪೋಕ್ಸೋ ಕಾಯ್ದೆ ಕುರಿತು ನ್ಯಾಯವಾದಿ ಎಸ್.ಬಿ.ಪಾಟೀಲ ಉಪನ್ಯಾಸ ನೀಡಿದರು.
ಪ್ರಾಚಾರ್ಯ ವಿಮಲಕಾಂತ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಬಿ.ಎಂ.ಸಿಂಗನಳ್ಳಿ, ಪಿ.ವ್ಹಿ.ಮಹಲಿನಮಠ, ಎನ್.ಬಿ.ಪೂಜಾರಿ, ಗವಿಸಿದ್ದಪ್ಪ ಆನೆಗುಂದಿ, ಎಸ್.ಆರ್.ಬೂದಿಹಾಳ, ವ್ಹಿ.ಪಿ.ನಂದಿಕೋಲ, ಎಸ್.ಎಚ್.ಜಾಧವ, ವ್ಹಿ.ಕೆ.ಹಿರೇಮಠ, ಎಂ.ಐ.ಮುಜಾವರ, ರೋಹಿತ ಸುಲ್ಪಿ, ಎನ್.ಎಂ.ಶೆಳ್ಳಗಿ, ಸಂಗಮೇಶ ಚಾವರ, ಆರ್.ಎಂ.ಕೊಳ್ಳೂರೆ, ನೀಲಕಂಠ ಮೇತ್ರಿ, ರಾಹುಲ ನಾರಾಯಣಕರ ಇನ್ನಿತರರು ಇದ್ದರು.

