ಸಿಂದಗಿ: ಪಟ್ಟಣದ ಕ್ರೀಡಾಂಗಣಕ್ಕೆ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಜಿಮ್ ಕೇಂದ್ರವನ್ನು ವೀಕ್ಷಿಸಿದ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಹೈಮಾಸ್ಕ ದೀಪ, ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಿ ಕ್ರೀಡಾಭಿಮಾನಿಗಳಿಗೆ ಅನುಕೂಲ ಮಾಡಿಕೊಡುವಂತೆ ಕ್ರೀಡಾಭಿಮಾನಿಗಳು ಮನವಿ ಮಾಡಿಕೊಂಡರು.
ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕ ರಮೇಶ ಭೂಸನೂರ, ಮೊದಲನೇ ಬಾರಿಗೆ ಶಾಸಕನಾದ ಸಂದರ್ಭದಲ್ಲಿ ಕ್ರೀಡಾಂಗಣ ನಿರ್ಮಿಸಿ ಕ್ರೀಡಾಭಿಮಾನಿಗಳಿಗೆ ಅನುಕೂಲ ಮಾಡಿದ್ದು ಇನ್ನೂ ಕ್ರೀಡಾ ಆಸಕ್ತಿಯನ್ನು ಹೆಚ್ಚಿಸಲು ಹೆಚ್ಚಿನ ಕ್ರೀಡಾ ಸಲಕರಣೆಗಳನ್ನು ಒದಗಿಸುವ ನಿಟ್ಟಿನಲ್ಲಿ ಯುವಜನ ಕ್ರೀಡಾ ಸಚಿವರಿಗೆ ಮನವಿ ಮಾಡಿಕೊಂಡಿದ್ದು ಅನುದಾನ ಮಂಜೂರಾದ ನಂತರ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ತರಬೇತುದಾರ ರಾಜು ಕಾಖಂಡಕಿ, ಹಾಜಿ ತಾಶಾಗೋಳ, ಮಕಬೂಲ ಸೌದಾಗರ, ರಾಹುಲ ಬಿರಾದಾರ, ಅಪ್ಪು ಸಿಂದಗಿ, ಫಜಲ್ ಸಿಂದಗಿ ಸೇರಿದಂತೆ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ದಾ ರಾವೂರ, ಪುರಸಭೆ ಸದಸ್ಯರಾದ ಶ್ರೀಶೈಲ ಬೀರಗೊಂಡ, ಸಂದೀಪ ಚೌರ ರಾಜಣ್ಣಿ ನಾರಾಯಣಕರ, ಅನೇಕರಿದ್ದರು.