spot_img
spot_img

ದೇವಾನಂದ ಚವ್ಹಾಣ ಮೊದಲು ತಮ್ಮ ಭವಿಷ್ಯ ನೋಡಿಕೊಳ್ಳಲಿ – ಪೂಜಾರಿ ವ್ಯಂಗ್ಯ

Must Read

spot_img
- Advertisement -

ಸಿಂದಗಿ: ರಾಜ್ಯದಲ್ಲಿ ಗಟ್ಟಿಯಾಗಿರುವ ಬಿಜೆಪಿ ಸರ್ಕಾರ ಶೀಘ್ರದಲ್ಲಿ ಪತನವಾಗಲಿದೆ ಎಂದು ಹೇಳಿಕೆ ನೀಡುವ ಶಾಸಕ ದೇವಾನಂದ ಚವ್ಹಾಣ ಅವರು ಭವಿಷ್ಯಗಾರರೇ? ಮೊದಲು ಅವರು ತಮ್ಮ ಭವಿಷ್ಯ ನೋಡಿಕೊಳ್ಳಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಜಶೇಖರ ಪೂಜಾರಿ ವ್ಯಂಗ್ಯ ಮಾಡಿದ್ದಾರೆ.

ನಾಗಠಾಣ ಕ್ಷೇತ್ರದ ಶಾಸಕ ಡಾ.ದೇವಾನಂದ ಚವ್ಹಾಣ ಅವರು ಬಿಜೆಪಿ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣ ಕ್ಷೇತ್ರದಲ್ಲಿ ಅವರಿಗೆ ಭವಿಷ್ಯವಿಲ್ಲ ಎಂದು ಅರಿತ ಅವರು ಅನವಶ್ಯಕವಾಗಿ ರಾಜ್ಯದ ಮಾಜಿ ಡಿಸಿಎಂ ಅವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಸೂಕ್ತವಲ್ಲ. ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಅಭಿವೃದ್ಧಿ ಕೆಲಸದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡಿಲ್ಲ. ಬಿಜೆಪಿ ಶಾಸಕರೊಂದಿಗೆ ಬೇರೆ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥ ನಾಯಕರಾಗಿದ್ದಾರೆ. ಅವರು ಪೂರ್ಣಾವಧಿ ಸರಕಾರ ನಿಭಾಯಿಸುತ್ತಾರೆ ವಿನಾಕಾರಣ ಒಂದು ಪಕ್ಷದ ಬಗ್ಗೆ ಕುಟುಕು ಮಾತನಾಡುವುದನ್ನು ನಿಲ್ಲಿಸಬೇಕು.

ಕುಣಿಯಲಿಕ್ಕೆ ಬಾರದಿದ್ದರೆ ನೆಲ ಡೊಂಕು ಎಂಬ ಗಾದೆಯಂತೆ ಶಾಸಕ ಡಾ.ದೇವಾನಂದ ಚವ್ಹಾಣ ಅವರು ಸರಕಾರದ ಅನುದಾನ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳದೇ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮಾಜಿ ಡಿಸಿಎಂ ಅವರು ಪುತ್ರ ವ್ಯಾಮೋಹದಿಂದ ಅಡ್ಡಿ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಮರಳು, ಮಾವಾ ಇನ್ನಿತರೆ ದಂಧೆಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಹೇಳುವ ಅವರು ಅಂಥ ದಂಧೆಗಳು ಕಂಡು ಬಂದಲ್ಲಿ ದೂರು ನೀಡಬೇಕೇ ವಿನಃ ಅನವಶ್ಯಕವಾಗಿ ಸರಕಾರ, ಮಾಜಿ ಡಿಸಿಎಂ ಅವರ ಬಗ್ಗೆ ಹೇಳಿಕೆ ನೀಡುತ್ತಿರುವುದು ಜನಪ್ರತಿನಿಧಿಯ ಲಕ್ಷಣವಲ್ಲ. ಅವರು ಮೊದಲು ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದಿದ್ದಾರೆ.

- Advertisement -
- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group