spot_img
spot_img

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ: ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

- Advertisement -

ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ

ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ ಅರಭಾವಿ ಬಿಜೆಪಿ ಮಂಡಲ ಏರ್ಪಡಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಎಲ್ಲ ಶಾಸಕ-ಸಂಸದರು ಒಂದಾಗಿ ದುಡಿದು ಪಕ್ಷವನ್ನು ಮತ್ತಷ್ಟು ಸದೃಡಗೊಳಿಸಿ ತಾಪಂ ಮತ್ತು ಜಿಪಂ ಚುನಾವಣೆಯಲ್ಲಿ ಬಿಜೆಪಿಯನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರೋಣ ಎಂದು ತಿಳಿಸಿದರು.

- Advertisement -

ತಾಪಂ ಮತ್ತು ಜಿಪಂ ಚುನಾವಣೆಯಲ್ಲಿ ಪ್ರಕಟಗೊಂಡಿರುವ ಮೀಸಲಾತಿಯನ್ನು ಪರಿಷ್ಕರಣೆ ಮಾಡುವಂತೆ ಚುನಾವಣಾ ಆಯೋಗವು ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸರ್ಕಾರವು ಈ ಸಂಬಂಧ ಪುನರ್ ಪರಿಶೀಲನಾ ಸಮಿತಿಯನ್ನು ರಚಿಸಿದೆ. ಈಗಾಗಲೇ ಪ್ರಕಟಿಸಿರುವ ಮೀಸಲಾತಿಯು ಕೆಲವು ಕ್ಷೇತ್ರಗಳಲ್ಲಿ ಬದಲಾವಣೆಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಚುನಾವಣೆಗಳಲ್ಲಿ ಗೆಲ್ಲಲಾಗದವರನ್ನು ಮುಂದಿನ ದಿನಗಳಲ್ಲಿ ನಾಮನಿರ್ದೇಶನ ಮಾಡಲಾಗುವುದು. ಯಾರಿಗೆ ಶಕ್ತಿ ಇರುತ್ತದೆಯೋ ಅವರು ಚುನಾವಣೆಯನ್ನು ಎದುರಿಸುತ್ತಾರೆ. ಆದರೆ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಕಾರ್ಯಕರ್ತರಿಗೆ ಮಣೆ ಹಾಕಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಅವರಿಗೂ ಸಹ ದುಡಿದ ಶ್ರಮಕ್ಕೆ ಅಧಿಕಾರ ನೀಡಿದಂತಾಗುತ್ತದೆ ಎಂದು ಹೇಳಿದರು.

- Advertisement -

ಬಿಜೆಪಿ ರಾಷ್ಟ್ರದ ಮೂಲೆ ಮೂಲೆಗಳಲ್ಲಿ ಬಲಿಷ್ಠಗೊಳ್ಳಲು ಶ್ಯಾಮಪ್ರಸಾದ ಮುಖರ್ಜಿ ಮತ್ತು ಪಂ. ದೀನ ದಯಾಳ ಉಪಾಧ್ಯೆ ಅವರ ಪಾತ್ರ ಬಹುಮುಖ್ಯವಾಗಿದೆ. ದೇಶದೆಲ್ಲೆಡೆ ಅಧಿಕಾರಕ್ಕೆ ತರಲು ಇವರುಗಳ ಹಾಕಿಕೊಟ್ಟ ಪರಂಪರೆ ಬಿಜೆಪಿ ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ. ಅಟಲ್ ಬಿಹಾರಿ ವಾಜಪೇಯಿ – ಲಾಲಕೃಷ್ಣ ಅಡ್ವಾನಿ ಜೋಡಿಯಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ ಶಾ ಅವರುಗಳು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದ್ದಾರೆ. ವಿಶ್ವದಲ್ಲಿಯೇ ಭಾರತವನ್ನು ಪ್ರಗತಿಶೀಲ ರಾಷ್ಟ್ರವನ್ನಾಗಿ ಮಾಡುವುದರ ಮೂಲಕ ಭಾರತ ವಿಶ್ವಕ್ಕೆ ಗುರುವಾಗುವ ಕಾಲ ಸನ್ನಿಹಿತವಾಗಿದೆ ಎಂದು ಅವರು ಹೇಳಿದರು.

ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಲ್ಲಿ ಕಾರ್ಯಕರ್ತರ ಸಹಕಾರದಿಂದ ಬಿಜೆಪಿ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಗೆ ಸ್ಪಷ್ಟ ಅಧಿಕಾರ ದೊರೆಯಲಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ಜಿಲ್ಲಾ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈರಣ್ಣ ಢವಳೇಶ್ವರ, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಮಹಿಳಾ ಮೋರ್ಚಾ ಅಧ್ಯಕ್ಷೆ ವಾಸಂತಿ ತೇರದಾಳ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಎಸ್‍ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಣ್ಣ ಕಂಟಿಕಾರ, ಯುವಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಬಸವರಾಜ ಮಾಳೇದವರ ಸ್ವಾಗತಿಸಿದರು. ಅರಭಾವಿ ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ ಕಾರ್ಯಕ್ರಮ ನಿರೂಪಿಸಿದರು. ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ವಂದಿಸಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾರತ ಮಾತೆ, ಶ್ಯಾಮ ಪ್ರಸಾದ ಮುಖರ್ಜಿ ಮತ್ತು ಪಂ. ದೀನ ದಯಾಳ ಉಪಾಧ್ಯೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ರೇವಣಸಿದ್ದಯ್ಯನವರ ಪುಣ್ಯಸ್ತ್ರೀ ರೇಕಮ್ಮ ಹನ್ನೆರಡನೇ ಶತಮಾನ ಎಂಬುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವ ಬಹುಮುಖ್ಯ ಕಾಲಘಟ್ಟ. ಶರಣರು ರಚಿಸಿದ ವಚನಗಳನ್ನು ಕನ್ನಡ ಸಾಹಿತ್ಯದ ಉಪನಿಷತ್ತುಗಳು ಎಂದು...
- Advertisement -

More Articles Like This

- Advertisement -
close
error: Content is protected !!
Join WhatsApp Group