ಯುವಕರ ಜ್ಞಾನ ಸದ್ಬಳಕೆಯಾಗಲಿ: ಎಸ್.ಬಿ. ಕಾಳೆ

Must Read

ಜಮಖಂಡಿ: ತಂತ್ರಜ್ಞಾನದ ದುರ್ಬಳಕೆಯಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಆದ್ದರಿಂದ ಯುವಜನತೆ ಮೊಬೈಲ್‌ನಿಂದ ದೂರವಿದ್ದು ರಾಷ್ಟ್ರದ ಅಭಿವೃದ್ಧಿಗಾಗಿ ತಮ್ಮ ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ. ಕಾಳೆ ಹೇಳಿದರು.

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಸವಜ್ಯೋತಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಬಸವಜ್ಯೋತಿ ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷ ಡಾ.ಗಿರೀಶ ಕಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೂ ಸನಾತನ ಧರ್ಮದ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿ ಅದರ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದರು.

ವಕೀಲರಾದ ಲಕ್ಷ್ಮಿ ಸವದಿ ಮಾತನಾಡಿ, ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ದಲಿತರು, ಮಹಿಳೆಯರು, ಶೋಷಿತರು, ನೊಂದವರು, ಸಂತ್ರಸ್ತರು ಹಾಗೂ ಮಕ್ಕಳಿಗೆ ದೊರೆಯುವ ಉಚಿತ ಕಾನೂನು ಅರಿವು ಮತ್ತು ನೆರವು ಕುರಿತು ಮಾಹಿತಿ ನೀಡಿದರು.

ಉಪಪ್ರಾಚಾರ್ಯ ಶ್ರೀಕಾಂತ ಬೆಳ್ಳಿಹಾಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೀನಾಕ್ಷಿ ನಡಕಟ್ಟಿ, ಗೀತಾ ಸಂತಿ ಇದ್ದರು. ಅಮೃತಾ ಬಳೋಲ ಪ್ರಾರ್ಥಿಸಿದರು. ಸಂತೋಷ ನಿರೂಪಿಸಿದರು.

LEAVE A REPLY

Please enter your comment!
Please enter your name here

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group