ಬೀದರ – ಪಿಎಸ್ ಐ ಅಕ್ರಮ ನೇಮಕಾತಿ ಹಗರಣ ಬಗ್ಗೆ ಹೈ-ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ನಡೆಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅಭಿಮತ ವ್ಯಕ್ತಪಡಿಸಿದರು.
ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ಎಡಿಜಿಪಿ ಬಂಧನವಾಗಿರುವ ಹಿನ್ನಲೆಯಲ್ಲಿ ಪತ್ರಕರ್ತರೊಡನೆ ಅವರು ಮಾತನಾಡಿದರು.
ಯಾರೇ ಪ್ರಭಾವಿ ರಾಜಕಾರಣಿಯಾಗಿರಲಿ, ಅಧಿಕಾರಿಯಾಗಿರಲಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಬೇಕು. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಅನುಭವಿಸಬೇಕು ಎಂದು ಖಂಡ್ರೆ ಆಗ್ರಹಿಸಿದರು.
ಅಲ್ಲದೆ ಮಾಂಜ್ರಾ ನದಿಯಿಂದ ರೈತರ ಜಮೀನುಗಳಿಗೆ ನೀರು ಹರಿಸುವ ಯೋಜನೆ ಜಾರಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೆ. ಪ್ರತಿಭಟನೆಗಳು ಮಾಡಿದ್ದೇವೆ ಸದನದಲ್ಲೂ ಉಲ್ಲೇಖಿಸಿದ್ದೇವೆ. ಹೀಗಾಗಿ 1110.70 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
ವರದಿ: ನಂದಕುಮಾರ ಕರಂಜೆ, ಬೀದರ