spot_img
spot_img

ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸೋಣ – ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು.

ಕಲ್ಲೋಳಿ ಪಟ್ಟಣದಲ್ಲಿ ಶುಕ್ರವಾರ ಜ.೨೬ ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಛೇರಿಯಲ್ಲಿ ಭಾರತ ಮಾತೆ, ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು, ಸಂವಿಧಾನವು ಜಾತಿ, ಮತ, ಪಂಥಗಳ ಭೇದ ಹೆಣ್ಣು ಗಂಡುಗಳೆಂಬ ಭಾವ ತೊರೆದು, ಬಡವ ಬಲ್ಲಿದನೆಂಬ ತಾರತಮ್ಯ ಮೀರಿ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡಿದೆ ಎಂದರು. 

ಗಣರಾಜ್ಯೋತ್ಸವ 2024ರ ಪರೇಡ್ ಥೀಮ್ ‘ವಿಕಸಿತ ಭಾರತ್’ ಮತ್ತು ‘ಭಾರತ್ – ಲೋಕತಂತ್ರ ಕಿ ಮಾತಾ’, ಇದು ಪ್ರಜಾಪ್ರಭುತ್ವದ ಪೋಷಕರಾಗಿ ಭಾರತದ ಪಾತ್ರವನ್ನು ಒತ್ತಿಹೇಳುತ್ತದೆ. ಭಾರತವು ತನ್ನ ಸ್ವಾತಂತ್ರ‍್ಯದ ಶತಮಾನೋತ್ಸವವನ್ನು ಆಚರಿಸುವ ಆಗಸ್ಟ್ 15, 2047ರ ವೇಳೆಗೆ ಭಾರತವನ್ನು ಜಗತ್ತಿನ ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯನ್ನು ‘ವಿಕಸಿತ ಭಾರತ್ ಪ್ರತಿನಿಧಿಸುತ್ತದೆ. ಇದು ಆರ್ಥಿಕ ಸಮೃದ್ಧಿ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಮತ್ತು ಪರಿಣಾಮಕಾರಿ ಆಡಳಿತದಂತಹ ಹಲವಾರು ಅಭಿವೃದ್ಧಿ ಕ್ಷೇತ್ರಗಳನ್ನು ಒಳಗೊಳ್ಳುತ್ತದೆ. ಭಾರತವು ಪ್ರಸ್ತುತ ಎಲ್ಲಿದೆ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಅದು ಯಾವ ಹಾದಿಯಲ್ಲಿ ಸಾಗಬೇಕು ಎಂಬುದರ ದಿಕ್ಸೂಚಿಯನ್ನು ತೋರಿಸುತ್ತದೆ ಎಂದರು.

- Advertisement -

ಶ್ರೀ ಮಹಾಲಕ್ಷ್ಮೀ ಪಿ.ಕೆ.ಪಿ.ಎಸ್, ಹಾಲು ಉತ್ಪಾದಕರ ಸಹಕಾರಿ ಸಂಘ, ಸೇವಾ ಸಂಸ್ಥೆ ಹಾಗೂ ಅಲ್ಲಮಪ್ರಭು ಎಫ್.ಪಿ.ಒ ಸಂಸ್ಥೆಗಳಲ್ಲಿ ಧ್ವಜಾರೋಹಣ ನೆರವೇರಿಸಿದರು.

ಸಹಕಾರಿ ಉಪಾಧ್ಯಕ್ಷ ಶ್ರೀಶೈಲ ತುಪ್ಪದ, ನಿರ್ದೇಶಕರಾದ ಬಾಳಪ್ಪ ಸಂಗಟಿ, ಶಿವಗೊಂಡ ವ್ಯಾಪಾರಿ,ಶಿವಪ್ಪ ಗೋಸಬಾಳ, ಸೋಮನಿಂಗ ಹಡಗಿನಾಳ, ಮಲ್ಲಿಕಾರ್ಜುನ ಹುಲೆನ್ನವರ, ಸಿದ್ದಪ್ಪ ಹೆಬ್ಬಾಳ, ಅಡಿವೆಪ್ಪ ಕುರಬೇಟ,  ಪ್ರಭು ಕಡಾಡಿ, ಹಣಮಂತ ಸಂಗಟಿ, ತುಕಾರಾಮ ಪಾಲ್ಕಿ, ಮಲ್ಲಪ್ಪ ಹೆಬ್ಬಾಳ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರೂ ಉಪಸ್ಥಿತರಿದ್ದರು.

- Advertisement -
- Advertisement -

Latest News

ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ನಿಧನ

ಹೊಸದೆಹಲಿ - ಭಾರತದ ೧೩ ನೇ ಪ್ರಧಾನ ಮಂತ್ರಿಯಾಗಿದ್ದ ಆರ್ಥಿಕ ತಜ್ಞ ಡಾ. ಮನಮೋಹನ ಸಿಂಗ್ ನಿಧನರಾಗಿದ್ದಾರೆ ೧೯೭೨ ರಲ್ಲಿ ಆರ್ಥಿಕ ಸಲಹೆಗಾರ,  ೧೯೭೬ ರಿಂದ ೧೯೮೦...
- Advertisement -

More Articles Like This

- Advertisement -
close
error: Content is protected !!
Join WhatsApp Group