ಆ. ೧೫ ಪೂರ್ವಭಾವಿ ಸಭೆ; ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಿಸೋಣ – ಅಜಿತ್ ಮೆನ್ನಿಕೇರಿ

Must Read

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...

ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ...

ಮುಷ್ಕರ ಮತ್ತು ಆರ್ಥಿಕ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ವಿದ್ಯಮಾನಗಳಲ್ಲಿ ಮುಷ್ಕರ ಕೂಡ ಒಂದು. ಬಂದ್ ಬಂದ್ ಬಂದ್.ಏನಿದು?ಏಕೆ ಮಾಡಬೇಕು? ಇದರಿಂದ ಆಗುವ ಬದಲಾವಣೆಗಳೇನು? ಯಾರಿಗೆ ಲಾಭ?...

ಮೂಡಲಗಿ – ಆಗಷ್ಟ್ ೧೫ ರ ರಾಷ್ಟ್ರೀಯ ಹಬ್ಬದಂದು ದೇಶದ ಅಭಿವೃದ್ಧಿ ಕುರಿತ ಮಾತುಗಳನ್ನಾಡುತ್ತ, ಸಂತೋಷ ಸಂಭ್ರಮಗಳಿಂದ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮೆನ್ನಿಕೇರಿ ಹೇಳಿದರು.

ತಹಶೀಲ್ದಾರ ಕಾರ್ಯಾಲಯ ಹಾಗೂ ಪುರಸಭಾ ಕಾರ್ಯಾಲಯ ಮೂಡಲಗಿ ಇವುಗಳ ಸಹಯೋಗದಲ್ಲಿ ಕರೆಯಲಾಗಿದ್ದ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಮಕ್ಕಳನ್ನು ಕರೆತಂದು ಗದ್ದಲ ಮಾಡಿ ಅನಾಹುತಕ್ಕೆ ಎಡೆ ಮಾಡಿಕೊಡಬಾರದು. ಸಾಮಾಜಿಕ ಶಿಸ್ತು, ಅಂತರ ಕಾಪಾಡಿಕೊಂಡು ಈ ಹಬ್ಬವನ್ನು ಆಚರಿಸಬೇಕು ಎಂದು ಅವರು ಕರೆ ನೀಡಿದರು.

- Advertisement -

ಸಿಪಿಐ ವೆಂಕಟೇಶ ಮುರನಾಳ ಹಾಗೂ ಪುರಸಭಾ ಅಧ್ಯಕ್ಷ ಹಣಮಂತ ಗುಡ್ಲಮನಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ ಡಿ ಜೆ ಮಹಾತ್ ಮಾತನಾಡಿ, ಯಾವುದೇ ಸಮಾರಂಭ ನಡೆಯಬೇಕಾದರೆ ಎಲ್ಲ ಇಲಾಖೆಗಳ ಸಹಕಾರ ಇದ್ದರೆ ಎಲ್ಲವೂ ಸರಾಗವಾಗಿ ನಡೆಯುತ್ತದೆ ಎಂದರು.

ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಸ್ವಾಗತಿಸಿ ಹಿಂದಿನ ಸಭೆಯ ನಿರ್ಣಯಗಳನ್ನು ಓದಿದರು.

ಆಗಷ್ಟ್ ೧೫ ರಂದು ಬೆಳಿಗ್ಗೆ ತಹಶೀಲ್ದಾರ ಕಚೇರಿಯಲ್ಲಿ ತಹಶೀಲ್ದಾರರು ಧ್ವಜಾರೋಹಣ ನೆರವೇರಿಸುವರು,ಪುರಸಭೆಯಲ್ಲಿ ಅಧ್ಯಕ್ಷರು ಧ್ವಜಾರೋಹಣ ಮಾಡುವರು, ರಾಜೀವ ಗಾಂಧಿ ನಗರದಲ್ಲಿ ಮುಖ್ಯಾಧಿಕಾರಿಗಳು ಹಾಗೂ ಗಾಂಧಿ ಚೌಕದಲ್ಲಿ ತಹಶೀಲ್ದಾರರು ಧ್ವಜಾರೋಹಣ ನೆರವೇರಿಸುವರು. ಈ ಸಂದರ್ಭದಲ್ಲಿ ಎಲ್ಲರೂ ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಪಾಲಿಸುತ್ತ ಸಂಭ್ರಮದಲ್ಲಿ ಪಾಲ್ಗೊಳ್ಳುವುದಾಗಿ ನಿರ್ಧರಿಸಲಾಯಿತು.

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನು ಕೇಳಿದಾಗ, ಸ್ವಾತಂತ್ರ್ಯೋತ್ಸವದಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಬೇಕು ಹಾಗೂ ನಗರದ ರಸ್ತೆಗಳಲ್ಲಿನ ತಗ್ಗುಗಳನ್ನು ತುಂಬಿಸಿ ಸಮತಟ್ಟಾಗಿಸಿ ನಗರವನ್ನು ಸಿಂಗರಿಸಬೇಕು ಎಂದು ಪತ್ರಕರ್ತ ಉಮೇಶ ಬೆಳಕೂಡ ಸಲಹೆ ನೀಡಿದರು.

ಹಿರಿಯ ಪತ್ರಕರ್ತರೊಬ್ಬರನ್ನು ಸಮಾರಂಭದಲ್ಲಿ ಸನ್ಮಾನಿಸಬೇಕು ಎಂದು ಪತ್ರಕರ್ತ ಮಲ್ಲು ಬೋಳನವರ ಸಲಹೆ ನೀಡಿದಾಗ, ಬಾಲಶೇಖರ ಬಂದಿಯವರಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು.

ಇತ್ತೀಚೆಗೆ ಕೊರೋನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ನೆರವೇರಿಸಿದ ಅಂಜುಮನ್ ಹಾಗೂ ಖಿದ್ಮತ್ ವೆಲ್ ಫೇರ್ ಸೊಸಾಯಿಟಿಯ ಕಾರ್ಯಕರ್ತರನ್ನೂ ಹಾಗೂ ಕೋವಿಡ್ ಕಾಲದಲ್ಲಿ ಚೆನ್ನಾಗಿ ಕಾರ್ಯ ನಿರ್ವಹಿಸಿದ ಆರು ಇಲಾಖೆಗಳ ಮುಖ್ಯಸ್ಥರನ್ನೂ ಸಮಾರಂಭದಲ್ಲಿ ಸನ್ಮಾನಿಸಲು ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ಮುಖ್ಯಾಧಿಕಾರಿ ದೀಪಕ ಹರ್ದಿ ಹಾಗೂ ಪುರಸಭಾ ಸದಸ್ಯರು, ಶಿಕ್ಷಣ ಇಲಾಖೆಯ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...
- Advertisement -

More Articles Like This

- Advertisement -
close
error: Content is protected !!