- Advertisement -
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಎಲ್ಲಾ ಖಾಸಗಿ ಹಾಗೂ ಕೇಂದ್ರೀಯ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಶೈಕ್ಷಣಿಕವಾಗಿ ಬಳಸುವಂತೆ ಒತ್ತಾಯಿಸಿ ಮೈಸೂರು ಕನ್ನಡ ಜಾಗೃತಿ ಸಮಿತಿಯಿಂದ ಇಂದು ಬೆಳಿಗ್ಗೆ ಮಾನಸ ಗಂಗೋತ್ರಿ ಆವರಣದಲ್ಲಿರುವ ಕೇಂದ್ರೀಯ ಪ್ರಾಯೋಗಿಕ ವಿದ್ಯಾಲಯದ ಪ್ರಾಂಶುಪಾಲರಾದ ಟಿ.ಹನುಮಂತಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಹಾಗೂ ನಗರಪಾಲಿಕೆ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಅರವಿಂದ ಶರ್ಮ,ಎನ್.ಜಿ ಗಿರೀಶ್ , ಡಾ.ಭೇರ್ಯ ರಾಮಕುಮಾರ್,ಶ್ರೀಮತಿ ಸೌಗಂಧಿಕಾ ಜೋಯಿಸ್,ಡಾ.ವಿನೋದಮ್ಮ ,ಸಾತನೂರು ದೇವರಾಜ್ ಉಪಸ್ಥಿತರಿದ್ದರು.
ಕೇಂದ್ರೀಯ ಪ್ರಾಯೋಗಿಕ ವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಬೋಧನೆಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಹಕ್ಕೊತ್ತಾಯ ಮಾಡಲಾಯಿತು.