ಬೀದರ:- ಆರು ವರ್ಷದ ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಎಸಗಿ. ಅತ್ಯಾಚಾರ ನಡೆಸಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಅಪರ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಬೀದರ ತಾಲೂಕಿನ ಮನ್ನಳ್ಳಿ ಗ್ರಾಮದ ಶಕೀಲ್ ಮೌಲಾನಾಸಾಬ್ ನೂರಬಾಗ್ ಶಿಕ್ಷೆಗೆ ಒಳಗಾದ ಆರೋಪಿ 2023ರ ಜು. 6 ರಂದು ಬಾಲಕಿಗೆ ಅತ್ಯಾಚಾರ ನಡೆಸಿರುವ ಕುರಿತು ಆಕೆಯ ತಾಯಿ ನೀಡಿರುವ ದೂರಿನ ಆಧಾರದ ಮೇಲೆ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಬೀದರ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸ ಅಲ್ಲಾಪೂರ ತನಿಖೆ ನಡೆಸಿ, ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಲ್ಲಿ ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣಾ ಪತ್ರ ಸಲ್ಲಿಸಿದರು….
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಚಿನ್ ಕೌಶಿಕ್ ಅವರು ಆರೋಪಿತನ ವಿರುದ್ಧ ಆರೋಪಗಳು ಸಾಬೀತು ಆಗಿರುವ ಹಿನ್ನಲೆ ಪೊಕ್ಸೋ ಕಾಯ್ದೆಯ ಕಲಂ 6 ಜೊತೆ ಭಾರತೀಯ ದಂಡ ಸಂಹಿತೆ ಕಲಂ 376 ಎ,ಬಿ ಅಡಿ ಕಠಿಣ ಜೀವಾವಧಿ ಶಿಕ್ಷೆ ಮತ್ತು 50ಸಾವಿರ ರೂ ದಂಡ ಆದೇಶ ಮಾಡಿದರು.
ದಂಡದ ₹50 ಸಾವಿರ ಮೊತ್ತವನ್ನು ನೊಂದ ಬಾಲಕಿಗೆ ನೀಡಬೇಕು. ರಾಜ್ಯ ಸರ್ಕಾರ ₹3 ಸಾವಿರ ಭರಿಸಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನೊಂದ ಬಾಲಕಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಂತೋಷಕುಮಾರ ಟಿ. ಸಿದ್ದೇಶ್ವರ ವಾದ ಮಂಡಿಸಿದ್ದರು.