spot_img
spot_img

ಶಿಸ್ತಿಲ್ಲದ ಜೀವನ ವ್ಯರ್ಥ – ಶಿಕ್ಷಣ ತಜ್ಞ ಚೇತನ್‍ರಾಮ್ ಅಭಿಮತ

Must Read

- Advertisement -

ಶಾರದಾ ವಿಲಾಸ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ವೇದಿಕೆ ಉದ್ಘಾಟನೆ

ಮೈಸೂರು -ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಪದವಿ ಪೂರ್ವ ಕಾಲೇಜಿನಲ್ಲಿ ಜೂ.21 ರಂದು ವಿದ್ಯಾರ್ಥಿ ವೇದಿಕೆ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರವನ್ನು ಆಯೋಜಿಸಲಾಗಿತ್ತು.

ಜ್ಯೋತಿ ಬೆಳಗಿಸಿ ಮಾತನಾಡಿದ ಶಿಕ್ಷಣ ತಜ್ಞ ಚೇತನ್‍ರಾಮ್ ಆರ್.ಎ. ಅವರು ಮಾತನಾಡಿ, ಶಿಸ್ತಿಲ್ಲದ ಜೀವನ ವ್ಯರ್ಥ, ಏಕೆಂದರೆ ಅಧ್ಯಯನದಲ್ಲಿ ಶಿಸ್ತಿಲ್ಲದಿದ್ದರೆ ಓದು ಗೊಂದಲವಾಗುತ್ತದೆ. ಹಾಗೂ ಶಿಸ್ತಿಲ್ಲದ ಜೀವನ ನಾವಿಕನಿಲ್ಲದ ಹಡಗಿನಂತಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆಯನ್ನು ಬೆಳೆಸಿಕೊಂಡು, ಸಮಯ ಪರಿಪಾಲನೆಯೊಂದಿಗೆ ಶಿಸ್ತಿನಿಂದ ಓದಿನಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಬೇಕೆಂದು ಕರೆ ನೀಡಿದರು.

- Advertisement -

ಜಗತ್ತಿನಲ್ಲಿ ಪ್ರತಿಭಾವಂತರಲ್ಲದವರು ಇಲ್ಲವೇ ಇಲ್ಲ. ಎಲ್ಲರಲ್ಲಿಯೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸುವ ಜವಾಬ್ದಾರಿ ಶಾಲಾ-ಕಾಲೇಜಿನ ಶಿಕ್ಷಕರ ಮೇಲೆ ಇದೆ. ಶಿಕ್ಷಕರಾದವರಿಗೆ ಬೋಧನೆಯೊಂದೇ ಮುಖ್ಯವಲ್ಲ. ವಿದ್ಯಾರ್ಥಿಗಳ ಮನಸ್ಸನ್ನು ಗೆಲ್ಲಬೇಕು. ಆನಂತರ ಪಾಠ, ಪ್ರವಚನವನ್ನು ಮಾಡಿ ಜೀವನ ಮೌಲ್ಯಗಳೊಂದಿಗೆ ಬದುಕನ್ನು ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡುವುದೇ ಅವರ ಜವಾಬ್ದಾರಿ ಆಗಿರುತ್ತದೆ. ಆದ್ದರಿಂದ ಗುರುಗಳು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಯತ್ತ ಗಮನ ಹರಿಸಬೇಕೆಂದು ಕಿವಿಮಾತು ಹೇಳಿದರು.

ಪ್ರೋತ್ಸಾಹ ಶಿಕ್ಷಕರದ್ದಾಗಿದ್ದರೆ, ಉತ್ಸಾಹ ವಿದ್ಯಾರ್ಥಿಗಳಲ್ಲಿರಬೇಕು. ಆಗ ಮಾತ್ರ ಆಸಕ್ತಿಯಿಂದ ವಿದ್ಯಾರ್ಥಿ ಓದಿನಲ್ಲಿ ತೊಡಗಲು ಸಾಧ್ಯವಾಗುತ್ತದೆ. ಇದಕ್ಕೆ ಸುತ್ತಮುತ್ತಲಿನ ವಾತಾವರಣವೂ ಕೂಡ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್.ಚಂದ್ರಶೇಖರ್ ಅವರು ಮಾತನಾಡಿ, ಇಂದು ಅಂತಾರಾಷ್ಟ್ರೀಯ ಯೋಗ ಹಾಗೂ ಸಂಗೀತ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ವಿದ್ಯಾರ್ಥಿಗಳು ಪ್ರತಿ ನಿತ್ಯವೂ ಯೋಗ, ಧ್ಯಾನದಲ್ಲಿ ಒಂದು ಗಂಟೆಯಾದರೂ ತೊಡಗಿಸಿಕೊಂಡರೆ ಓದಿನಲ್ಲಿ ಹೆಚ್ಚು ಹೆಚ್ಚು ಮನಸ್ಸು, ಏಕಾಗ್ರತೆ ಹಾಗೂ ನೆನಪಿನ ಶಕ್ತಿ ವೃದ್ಧಿಸುತ್ತದೆಂದು ತಿಳಿಸಿದರು.

- Advertisement -

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಸಿ.ಕೆ.ಅಶೋಕಕುಮಾರ್ ಅವರು, ವಿದ್ಯಾರ್ಥಿಗಳಲ್ಲಿ ಪರಿಶ್ರಮವೊಂದಿದ್ದರೆ ಯಶಸ್ಸು ತಾನಾಗಿಯೆ ಬರುತ್ತದೆ. ಆತ್ಮವಿಶ್ವಾಸ ಮತ್ತು ಸಮಯಪ್ರಜ್ಞೆ ಹಾಗೂ ದೃಢ ಸಂಕಲ್ಪ ಹೊಂದಬೇಕು. ವಿದ್ಯಾರ್ಥಿಗಳು ಓದಿನ ಕಡೆ ಗಮನ ಇದ್ದರೆ ಗುರಿಯನ್ನು ಮುಟ್ಟಬಹುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಕಳೆದ ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಹಾಗೆಯೇ ಯೋಗ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಮುಖ್ಯ ಅತಿಥಿಗಳಾದ ಶಿಕ್ಷಣತಜ್ಞ ಚೇತನ್‍ರಾಮ್‍ರವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಉಪನ್ಯಾಸಕರಾದ ರಾಜೇಂದ್ರಪ್ರಸಾದ್ ಹೊನ್ನಲಗೆರೆ ಅತಿಥಿಗಳನ್ನು ಸ್ವಾಗತಿಸಿ, ಪರಿಚಯಿಸಿದರೆ, ಉಪನ್ಯಾಸಕ ವೆಂಕಟರಾಮ್ ಜಿ. ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಆಂಗ್ಲ ವಿಭಾಗದ ಉಪನ್ಯಾಸಕರಾದ ಮನೋಜ್‍ಕುಮಾರ್ ನೆರವೇರಿಸಿದರು. ವಿದ್ಯಾರ್ಥಿ ಅಭಿರಾಂ ಪ್ರಾರ್ಥನೆನೆರವೇರಿಸಿದರೆ, ಉಪನ್ಯಾಸಕರಾದ ಡಾ.ಡಿ.ಸಿ.ಉಮೇಶ್ ಹಾಗೂ ಡಾ.ಪೂಜಾ ಮತ್ತು ಎಂ.ಕೆ.ರಶ್ಮಿಯವರು ಪ್ರತಿಭಾನ್ವಿತ ವಿದ್ಯಾರ್ಥಿಗಳ ಹೆಸರನ್ನು ವಾಚಿಸಿದರು. ನಂತರ ಯೋಗ ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನೆರವೇರಿತು.

- Advertisement -
- Advertisement -

Latest News

ಶಿವಾನಂದ ಮಹಾವಿದ್ಯಾಲಯದಲ್ಲಿ ವರಕವಿ ಬೇಂದ್ರೆಯವರ ೪೩ನೇ ಪುಣ್ಯಸರಣೆ

ಕಾಗವಾಡ: ನಗರದ ಶಿವಾನಂದ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರಾಯೋಜಿತ ಕನ್ನಡ ವಿಭಾಗ ವರಕವಿ ಶಬ್ದಗಾರುಡಿಗ ಡಾ. ದ. ರಾ. ಬೇಂದ್ರೆಯವರ ೪೩ನೇ ಪುಣ್ಯಸ್ಮರಣೆಯನ್ನು ಆಯೋಜಿಸಲಾಗಿತ್ತು. ಈ ಸಮಾರಂಭದ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group