ಬಿಎಸ್ ವೈ ಬದಲಿಸಿದರೆ ಲಿಂಗಾಯತರು ಬಿಜೆಪಿ ಕೈಬಿಡುತ್ತಾರೆ : ಡಾ|| ಬಸವಲಿಂಗ ಪಟ್ಟದ್ದೇವರ ಎಚ್ಚರಿಕೆ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಬೀದರ – ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಲಿಂಗಾಯತ ಧರ್ಮದ ಜನರು ಬಿ.ಎಸ್.ಯಡಿಯೂರಪ್ಪ ನವರ ಬೆನ್ನಿಗೆ ನಿಲ್ಲುತ್ತಾರೆ ಎಂದು ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಬೀದರ್ ಕೇಂದ್ರ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ

ರಾಜ್ಯದಲ್ಲಿ ಯಡಿಯೂರಪ್ಪನವರು ಜನಪರ-ಜೀವಪರ ಆಡಳಿತವನ್ನು ನಡೆಸುತ್ತಿದ್ದಾರೆ. ಇವರ ಅಧಿಕಾರದ ಅವಧಿಯಲ್ಲಿ ರಾಜ್ಯ ಪ್ರಗತಿಯನ್ನು ಸಾಧಿಸುತ್ತಿದೆ. ಅವರು ಜಾತ್ಯತೀತವಾಗಿ ಎಲ್ಲಾ ಸಮುದಾಯದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಯಲ್ಲಿ ತಂದಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಭಾಗಕ್ಕೆ ಅವರ ಕೊಡುಗೆ ಅಪಾರವಿದೆ. ಅವರು ಅನುಭವಮಂಟಪದ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದಾರೆ.ಅವರು ಭಾರತೀಯ ಜನತಾ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತರಿಂದ ಮೇಲೆ ಬಂದು ಈ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತಂದಿದ್ದಾರೆ. ತಮ್ಮ ಸಂಪೂರ್ಣ ಜೀವನವನ್ನೇ ಪಕ್ಷದ ಬೆಳವಣಿಗೆಗಾಗಿ ದುಡಿದಿದ್ದಾರೆ, ದುಡಿಯುತ್ತಿದ್ದಾರೆ. ಮುಂದೆಯೂ ಪಕ್ಷದ ಹಿತದೃಷ್ಟಿಯಿಂದ ಕಾರ್ಯ ಮಾಡುವ ಉತ್ಸಾಹ ಇವರಲ್ಲಿದೆ ಆದರೂ ಯಡಿಯೂರಪ್ಪ ಅವರನ್ನು ಬದಲಾಯಿಸಲು ಹೊರಟಿರುವುದು ಖಂಡನೀಯ ಎಂದರು.

ಯಡಿಯೂರಪ್ಪ ಅವರಿಗೆ ಜನಬೆಂಬಲದ ಜೊತೆಗೆ ಪಕ್ಷಾತೀತವಾಗಿ ಅನೇಕ ನಾಯಕರ ಬೆಂಬಲವೂ ಇದೆ. ಆದರೂ ಸ್ವಪಕ್ಷದ ಕೆಲವು ನಾಯಕರು ಇವರನ್ನು ಅಧಿಕಾರದಿಂದ ಹೊರತೆಗೆಯುವ ಹುನ್ನಾರ ನಡೆಸುತ್ತಿದ್ದಾರೆ. ಇವರನ್ನು ಹೊರತೆಗೆದರೆ ರಾಜ್ಯದ ಪ್ರಗತಿಗೆ ಹಾಗೂ ಪಕ್ಷಕ್ಕೆ ಬಹಳಷ್ಟು ನಷ್ಟ ಆಗುತ್ತದೆ.

- Advertisement -

ಮತ್ತೆ ರಾಜ್ಯದಲ್ಲಿ ಬಲಾಢ್ಯವಾಗಿರುವ ಲಿಂಗಾಯತ ಸಮುದಾಯ ಭಾರತೀಯ ಜನತಾ ಪಕ್ಷದಿಂದ ದೂರ ಸರಿಯುತ್ತದೆ ಎಂದು ಎಚ್ಚರಿಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಯಡಿಯೂರಪ್ಪನವರಿಗೆ ಪೂರ್ಣ ಅವಧಿ ಮುಗಿಯುವವರೆಗೆ ಮುಖ್ಯಮಂತ್ರಿಯಾಗಿ ಜನಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಕರ್ನಾಟಕ ರಾಜಕೀಯದಲ್ಲಿ ಮತ್ತೆ ಇತಿಹಾಸದ ಪುನರಾವರ್ತನೆ ಆಗುತ್ತದೆ ಎಂದು ಹಿರೇಮಠ ಸಂಸ್ಥಾನದ ಡಾ|| ಬಸವಲಿಂಗ ಪಟ್ಟದ್ದೇವರು ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!